ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಘಟಕಕ್ಕೆ ಶಾಸಕ ಜೆ.ಎನ್.ಗಣೇಶ್ ಚಾಲನೆ ನೀಡಿದರು.
ಕುರುಗೋಡು: ಮೂತ್ರಪಿಂಡ ವೈಫಲ್ಯದಿಂದ ಬಳಲುವವರ ಅನುಕೂಲಕ್ಕಾಗಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ರಕ್ತ ಶುದ್ಧೀಕರಣ ಘಟಕ ತೆರೆಯಲಾಗಿದ್ದು, ಇದರ ಪ್ರಯೋಜನ ಪಡೆಯಬೇಕು ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಘಟಕ ಉದ್ಘಾಟಿಸಿ ಬುಧವಾರ ಮಾತನಾಡಿದರು. ಕ್ಷೇತ್ರದಲ್ಲಿನ ಆಸ್ಪತ್ರೆಗಳಿಗೆ ಅಗತ್ಯ ಆರೋಗ್ಯ ಉಪಕರಣ ಖರೀದಿಗೆ ಸುಮಾರು 44 ಕೋಟಿ ರೂ. ಪ್ರಕಟಿಸಲಾಗಿದೆ. ವಾರದಲ್ಲಿ ಎರಡು ಬಾರಿ ಹೊಸಪೇಟೆ, ಬಳ್ಳಾರಿಗೆ ತೆರಳಿ ರಕ್ತ ಶುದ್ಧೀಕರಣ ಮಾಡಿಸುವುದು ಹಾಗೂ ಆರ್ಥಿಕ ಸಮಸ್ಯೆಯಿಂದ ಚಿಕಿತ್ಸೆ ಪಡೆಯದೆ ಸಾವಿಗೀಡಾಗುವುದನ್ನು ತಪ್ಪಿಸಲು ಪಟ್ಟಣದಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಮುಂದಿನ ನಾಲ್ಕು ತಿಂಗಳಲ್ಲಿ ನೂರು ಹಾಸಿಗೆ ಆಸ್ಪತ್ರೆ ಉದ್ಘಾಟಿಸಲಾಗುವುದು. ಸುಸಜ್ಜಿತ ತಾಯಿ ಮತ್ತು ಮಗುವಿನ ಘಟಕವನ್ನೂ ತೆರೆಯಲಾಗುವುದು ಎಂದು ತಿಳಿಸಿದರು.