ಕೂಡ್ಲಿಗಿಯ ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಗ್ರಂಥಾಲಯಕ್ಕೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಚಾಲನೆ ನೀಡಿದರು. ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ ಪಕ್ಕೀರಪ್ಪ, ನಿಲಯ ಪಾಲಕ ಎ.ಸೈಯ್ಯದ್, ವಿದ್ಯಾರ್ಥಿಗಳು ಇದ್ದರು. 
ಬಳ್ಳಾರಿ

ಉಚಿತ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

ಪ್ರಮುಖ ಮುಖ್ಯಾಂಶಗಳು

  • ಸದ್ಬಳಕೆ ಮಾಡಿಕೊಳ್ಳಿ

ಉಚಿತ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

ಕೂಡ್ಲಿಗಿ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಪಟ್ಟಣದ ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪ್ರಸ್ತುತ ದಿನಗಳಲ್ಲಿ ವಿಪುಲ ಅವಕಾಶಗಳಿವೆ.
ಯುಪಿಎಸ್ಸಿ, ಕೆಪಿಎಸ್ಸಿ ಆಕಾಂಕ್ಷಿಗಳಿಗೆ ಅಗತ್ಯ ಪುಸ್ತಕಗಳು, ಪತ್ರಿಕೆಗಳು, ಅಧ್ಯಯನ ಸಾಮಗ್ರಿಗಳು ಮತ್ತು ಉಚಿತ ತರಬೇತಿ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದರು.
ದಲಿತರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಉಚಿತ ತರಬೇತಿ, ಹಾಸ್ಟೆಲ್ ಮತ್ತು ಲೈಬ್ರರಿ ಸೌಲಭ್ಯ ಒದಗಿಸಲಾಗಿದೆ. ಸರ್ಕಾರ ಸಾರ್ವಜನಿಕ ಗ್ರಂಥಾಲಯ ಹಾಗೂ ವಸತಿ ನಿಲಯಗಳಲ್ಲಿ ಇಂತಹ ಮಹತ್ತರ ಯೋಜನೆಗೆ ಮುಂದಾಗಿದೆ. ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಸಿಪಿಐ ಪ್ರಲ್ಹಾದ್ ಚನ್ನಗಿರಿ, ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ ಪಕ್ಕೀರಪ್ಪ, ನಿಲಯ ಪಾಲಕ ಎ.ಸೈಯ್ಯದ್, ನಿವೃತ್ತ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ತಳವಾರ ಶರಣಪ್ಪ ಇತರರಿದ್ದರು.