ವಿಶ್ವ ಆರೈಕೆದಾರ ದಿನಾಚರಣೆ ಕಾರ್ಯಕ್ರಮವನ್ನು ನ್ಯಾ.ರಾಜೇಶ್ ಎನ್.ಹೊಸಮನೆ ಉದ್ಘಾಟಿಸಿದರು 
ಬಳ್ಳಾರಿ

ಆಯಾಗಳು ದೇವರ ಸಮಾನ

ಪ್ರಮುಖ ಮುಖ್ಯಾಂಶಗಳು

  • ಪ್ರತಿಯೊಬ್ಬರ ಜೀವನದಲ್ಲಿ ಆರೈಕೆದಾರರ
  • ಅನುಗ್ರಹ ವಿಶೇಷ ಮಕ್ಕಳ
  • ವಿಶ್ವ ಆರೈಕೆದಾರ ದಿನಾಚರಣೆ
ಬಳ್ಳಾರಿ : ಅಂಗವಿಕಲರ ಸೇವೆ ಮಾಡುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಅವರ ಸೇವೆ ಮಾಡುವಂತಹ ಪೋಷಕರು, ಶಿಕ್ಷಕರು, ಆಯಾಗಳು ದೇವರ ಸಮಾನ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಅನುಗ್ರಹ ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ ವಿಶ್ವ ಆರೈಕೆದಾರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರ ಜೀವನದಲ್ಲಿ ಆರೈಕೆದಾರರ ಪಾತ್ರ ಮಹತ್ವದಾಗಿದ್ದು, ವಿಶೇಷ ಚೇತನರ ಹಾಗೂ ಹಿರಿಯರನ್ನು ಆರೈಕೆ ಮಾಡುವುದು ವಿಶೇಷ ಸೇವೆಯಾಗಿದೆ  ಎಂದರು.