ಪ್ರಮುಖ ಮುಖ್ಯಾಂಶಗಳು
ಬಳ್ಳಾರಿ :
ಒಬ್ಬ ದಲಿತ ಹಾಗೂ ಹಿಂದುಳಿದ ನಾಯಕ ಬೆಳೆಯುವುದನ್ನು ಬಿಜೆಪಿ ನಾಯಕರು ಸಹಿಸಲ್ಲ ಎಂದು ಸಚಿವ ಬಿ.ನಾಗೇಂದ್ರ ಹೇಳಿದರು.
ತಾಲೂಕಿನ ಚೆಳ್ಳಗುರ್ಕಿ ಗ್ರಾಮದಲ್ಲಿ ನೂತನವಾಗಿ ಸಚಿವರಾದ ಹಿನ್ನಲೆ ಎರ್ರಿತಾತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿರೋಧ ಪಕ್ಷದ ನಾಯಕ ಛಲುವಾದಿ ನಾರಾಯಣಸ್ವಾಮಿ ಹಿರಿಯರು. ಅವರು ಆ ರೀತಿಯ ಹೇಳಿಕೆ ನೀಡಿರುವ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಬಿಜೆಪಿಯಲ್ಲೇ ಭ್ರಷ್ಟಾಚಾರದ ಆರೋಪ ಎದುರಿಸದವರು ಎಷ್ಟು ಜನ ಇದ್ದಾರೆ?" ಎಂದು ಪ್ರಶ್ನಿಸಿದರು.
ಶಾಸಕ ಜಿ.ಜನಾರ್ದನರೆಡ್ಡಿ ಅವರು ತಮ್ಮ ಮಾತಿನ ಮೇಲೆ ನಿಗಾ ಇಟ್ಟುಕೊಂಡು ಮಾತನಾಡಬೇಕು. ಏಕವಚನದಲ್ಲಿ ಮಾತನಾಡುವುದನ್ನು ಬಿಡಬೇಕು. ನಾನೂ ಆ ರೀತಿಯಲ್ಲಿ ಮಾತನಾಡಬಹುದು. ಆದರೆ,
ಅವರ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಮೊದಲು ಮಾತನಾಡುವುದನ್ನು ಸರಿಯಾಗಿ ಕಲಿಯಬೇಕು ಎಂದು ಕಿಡಿಕಾರಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬಗ್ಗೆ ನಾವೂ ಮಾತನಾಡಬಹುದು. ಅವರು ಏನು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ತಂದೆ , ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿತ್ತು ಎಂದು ಟೀಕಿಸಿದರು.