ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ನಿವಾಸ ಮುಂಭಾಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ, ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ, ಎಂಎಲ್ಸಿ ವೈ.ಎಂ.ಸತೀಶ್, ಮುಖಂಡರಾದ ಡಾ.ಎಸ್.ಜೆ.ವಿ.ಮಹಿಪಾಲ್, ವೆಂಕಟರಮಣ, ಉಜ್ವಲ, ಸುರೇಖಾ, ಅಂಜಲಿ, ರವಿಕುಮಾರ್ ಇತರರಿದ್ದರು. 
ಬಳ್ಳಾರಿ

ಕಾಂಗ್ರೆಸ್ ನಾಯಕರ ನಡೆ ಖಂಡನೀಯ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ
ಬಳ್ಳಾರಿ : ದೆಹಲಿಯ ಜಂತರ್ ಮಂತರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನಿವಾಸ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಖಂಡಿಸಿ, ಇಲ್ಲಿನ ಗಡಿಗಿ ಚನ್ನಪ್ಪ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಗುರುವಾರ ಪ್ರತಿಭಟನೆ ನಡೆಯಿತು.
ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ, ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಕೆಲ ಕಾಲ ರಸ್ತೆ ತಡೆ ನಡೆಸಿ, ಕಾಂಗ್ರೆಸ್ ಹಾಗೂ ನಾಯಕರ ವಿರುದ್ಧ ಘೋಷಣೆ ಕೂಗಿದರು.
ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸಲು ಸಂವಿಧಾನಬದ್ಧ ಮಾರ್ಗಗಳಿವೆ. ಆದರೆ, ಕಾಂಗ್ರೆಸ್ ನಾಯಕರು ಕಾನೂನು ಉಲ್ಲಂಘಿಸಿ ಪ್ರಧಾನಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿರುವುದು ಖಂಡನೀಯ ಎಂದು ಕಿಡಿಕಾರಿದರು. ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ರಾಜ್ಯ ನಾಯಕರ ವಾಹನ ಹಾಗೂ ಮುಖಂಡರ ಮೇಲೆ ಮೊಟ್ಟೆ ಎಸೆದಿರುವ ಘಟನೆ ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದಲ್ಲಿ ಕಾಂಗ್ರೆಸ್ ಯುವಕರನ್ನು ದಿಕ್ಕು ತಪ್ಪಿಸುತ್ತಿದೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ದೂರಿದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
===