ಬಳ್ಳಾರಿಯ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರವನ್ನು ಡಿಸಿ ಕೆ.ನಾಗೇಂದ್ರ ಪ್ರಸಾದ್ ಉದ್ಘಾಟಿಸಿದರು. ವಿಎಸ್‌ಕೆ ವಿವಿ ಪ್ರೊ.ಡಾ.ನಿರಂಜನ್, ನಿ.ಜಂಟಿ ನಿರ್ದೇಶಕ ಶ್ರೀನಿವಾಸ್‌ರಾವ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಎಡಿಸಿ ಮಹಮ್ಮದ್ ಎನ್.ಜುಬೇರ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಜಿಪಂ ಯೋಜನಾಧಿಕಾರಿ ಪ್ರಮೋದ್ ಇದ್ದರು. === 
ಬಳ್ಳಾರಿ

ಅಭಿವೃದ್ಧಿ ನಿರ್ಣಯದ ಅಂಶವಿರಲಿ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಅಭಿವೃದ್ಧಿ
ಬಳ್ಳಾರಿ : ವಿಶ್ವದಲ್ಲಿ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಭಾರತವೂ 130ನೇ ಸ್ಥಾನದಲ್ಲಿದೆ. ಇದಕ್ಕೆ ಕಾರಣ ಮಾನವ ಸಂಪನ್ಮೂಲ ಅಭಿವೃದ್ಧಿ ಹೊಂದುತ್ತಿಲ್ಲ ಎಂದು ಡಿಸಿ ಕೆ.ನಾಗೇಂದ್ರ ಪ್ರಸಾದ್ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ ಮತ್ತು ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಠಿ ಯೋಜನೆ ತಯಾರಿಕೆಗೆ ಸಂಬಂಧಿಸಿದಂತೆ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳಿಗೆ ವರದಿಗಳ ತಯಾರಿಕೆಗೆ ದತ್ತಾಂಶ, ಸೂಚಕ ಹಾಗೂ ಸೂಚ್ಯಾಂಕಗಳು ಕುರಿತು ಶುಕ್ರವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಒಂದು ದೇಶದ ಅಭಿವೃದ್ಧಿ ಎಂದರೆ ಮಾನವನ ಅಭಿವೃದ್ಧಿ ಅಳತೆಯ ಮೂಲಕ ಹೇಳಬಹುದಾಗಿದ್ದು, ಪ್ರತಿಯೊಂದು ರಾಷ್ಟಗಳು ಇಂತಹ ವರದಿಗಳು ತಯಾರಿಸುತ್ತವೆ. ಆದ್ದರಿಂದ, ಜಿಲ್ಲಾ ಮಾನವ ಅಭಿವೃದ್ಧಿ ಮತ್ತು ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆರವರೆಗೆ ವರದಿ ತಯಾರಿಕೆ ಕುರಿತಂತೆ ಅಧಿಕಾರಿಗಳು ನೀಡುವ ವರದಿಯಲ್ಲಿನ ಅಂಶಗಳು ಜಿಲ್ಲೆಯ ಅಭಿವೃದ್ಧಿ ನಿರ್ಣಯಿಸುವ ಪೂರಕ ಅಂಶಗಳಾಗಿರಬೇಕು ಎಂದರು.
ಜಿಲ್ಲಾ ಮಾನವ ಅಭಿವೃದ್ಧಿ ವರದಿಯು ಜಿಲ್ಲೆಯ ಜನರ ಕಲ್ಯಾಣ, ಶಿಕ್ಷಣ, ಆರೋಗ್ಯ ಮತ್ತು ಆದಾಯದಂತಹ ಅಂಶಗಳನ್ನು ಅಳೆಯುವ ಬಹಳ ಮುಖ್ಯವಾದ ವರದಿಯಾಗಿದ್ದು, ಎಲ್ಲ ಇಲಾಖೆ ಅಧಿಕಾರಿಗಳು ವರದಿ ತಯಾರಿಕೆ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡುವ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಸಹಕರಿಸಬೇಕು. ನಿಖರವಾದ ಅಂಕಿ- ಅಂಶಗಳನ್ನು ನೀಡುವುದರಿಂದ ಜಿಲ್ಲೆಯೂ ಮಾನವ ಅಭಿವೃದ್ಧಿಯಲ್ಲಿ ಮುಂದುವರಿಯಲಿದೆ ಎಂದು ಹೇಳಿದರು.
ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿ, ಶಿಕ್ಷಣ, ಆರೋಗ್ಯ ಪೋಷಣಾ ಸ್ಥಿತಿ, ಜೀವನೋಪಾಯ, ಮೂಲಸೌಕರ್ಯ, ಸಾಮಾಜಿಕ ಒಳಗೊಳ್ಳುವಿಕೆ ಹಾಗೂ ಪರಿಸರದ ಸುಸ್ಥಿರತೆ ಸೇರಿದಂತೆ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳ ಆಧಾರದ ಮೇಲೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವುದು ಈ ವರದಿಗಳ ಪ್ರಮುಖ ಗುರಿಯಾಗಿರುತ್ತದೆ. ಅಧಿಕಾರಿಗಳು ದತ್ತಾಂಶ ಸಂಗ್ರಹಣೆ, ವಿಶ್ಲೇಷಣೆ, ಇಲಾಖಾವಾರು ಸಹಕಾರ ಮತ್ತು ಕಾಲಮಿತಿಯೊಳಗೆ ಮಾಹಿತಿ ಒದಗಿಸಬೇಕು. ಜಿಲ್ಲೆಯ ಸಮಗ್ರ ಹಾಗೂ ಸಮತೋಲನೆಯುತ ಅಭಿವೃದ್ಧಿಗಾಗಿ ಇಲಾಖೆಗಳ ನಡುವೆ ಪರಸ್ಪರ ಸಮನ್ವಯ ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.