ಬಳ್ಳಾರಿಯಲ್ಲಿ ಆಯೋಜಿಸಿದ್ದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಸಿದ್ಧಾಂತ ಶಿಖಾಮಣಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ಚನ್ನವೀರ ಸ್ವಾಮೀಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ, ತಾಲೂಕು ಅಧ್ಯಕ್ಷ ಜಿ.ನಾಗಭೂಷಣಗೌಡ, ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮುಖಂಡರಾದ ಪಲ್ಲೇದ ಪಂಪಾಪತಿ, ಡಾ.ಪುರುಷೋತ್ತಮಗೌಡ, ಬಸವರಾಜ ಇತರರಿದ್ದರು.
ಬಳ್ಳಾರಿ : ವೀರಶೈವ ಧರ್ಮವು ಭಗವಂತ ಮತ್ತು ಭಕ್ತನ ನಡುವಿನ ನೇರ ಸಂಪರ್ಕ ಒದಗಿಸಿ ಇಷ್ಟಲಿಂಗದ ಮಹತ್ವ ಸಾರಿದ ಮಹಾನ್ ಚೇತನ್ ರೇಣುಕಾಚಾರ್ಯರು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಹೇಳಿದರು.
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಆಯೋಜಿಸಿದ್ದ ಶ್ರೀಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೀರಶೈವ ಧರ್ಮದಲ್ಲಿ ವಿಜ್ಞಾನವೂ ಇದೆ, ಆಚರಣೆಯೂ ಇದೆ ಎಂಬುದಾಗಿ ತಿಳಿಸಿದವರು. ಪಂಚಗಣಾಧೀಶ್ವರರು ಪರಮಾತ್ಮನ ಆದೇಶದಂತೆ ಅವತರಿಸಿ ವೀರಶೈವ ಧರ್ಮವನ್ನು ಸ್ಥಾಪಿಸಿದರು. ಸಿದ್ಧಾಂತ ಶಿಖಾಮಣಿಯ ಮೂಲಕ ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಘೋಷಣೆಯ ಮೂಲಕ ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಯಿತು. ಸಿದ್ಧಾಂತ ಶಿಖಾಮಣಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ನಗರದಲ್ಲಿ ಭಕ್ತಿಭಾವ ಹಾಗೂ ಧಾರ್ಮಿಕ ವೈಭವದಿಂದ ನೆರವೇರಿತು.