ಬೈಕ್‌ಗೆ ಲಾರಿ ಡಿಕ್ಕಿ, ಇಬ್ಬರ ಸಾವು 
ಬಳ್ಳಾರಿ

ಬೈಕ್‌ಗೆ ಲಾರಿ ಡಿಕ್ಕಿ, ಇಬ್ಬರ ಸಾವು

ಪ್ರಮುಖ ಮುಖ್ಯಾಂಶಗಳು

  • ಸವಾರರಿಬ್ಬರು ಸ್ಥಳದಲ್ಲೇ ಮೃತ
  • ನಿರ್ಲಕ್ಷೃದ ಚಾಲನೆಯೇ ಅಪಘಾತಕ್ಕೆ ಕಾರಣ
ಬಳ್ಳಾರಿ : ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಡೂರು ತಾಲೂಕಿನ ಸುಲ್ತಾನಪುರ ಬಳಿ ನಡೆದಿದೆ. ಕುರುಗೋಡು ತಾಲೂಕಿನ ಎಮ್ಮಿಗನೂರು ಗ್ರಾಮದ ಜಗದೀಶ್ (28), ಓರ್ವಾಯಿ ಗ್ರಾಮದ ದೊಡ್ಡಬಸಪ್ಪ (26) ಮೃತರು.
ಇಬ್ಬರೂ ಖಾಸಗಿಯ ನವಚೇತನ ಫೈನಾನ್ಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದರು. ಯುವಕರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಚಾಲಕನ ಮಿತಿಮೀರಿದ ವೇಗ ಹಾಗೂ ನಿರ್ಲಕ್ಷೃದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕುಡತಿನಿಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
===