ಹೂವಿನಹಡಗಲಿ ತಾಲೂಕಿನ ಮಾಗಳ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿ ಅಗ್ನಿಮಹೋತ್ಸವದ ನಿಮಿತ್ತ ಪುರವಂತರು ವಡಪುಗಳನ್ನು ಹೇಳಿದರು. 
ಬಳ್ಳಾರಿ

ವೀರಭದ್ರೇಶ್ವರ ಅಗ್ನಿಮಹೋತ್ಸವ ಸಂಪನ್ನ

ಪ್ರಮುಖ ಮುಖ್ಯಾಂಶಗಳು

  • ವೀರಭದ್ರೇಶ್ವರ

ವೀರಭದ್ರೇಶ್ವರ ಅಗ್ನಿಮಹೋತ್ಸವ ಸಂಪನ್ನ

ಹೂವಿನಹಡಗಲಿ: ಮಾಗಳ ಗ್ರಾಮದಲ್ಲಿ ಮಂಗಳವಾರ ವೀರಭದ್ರೇಶ್ವರ ಸ್ವಾಮಿ ಅಗ್ನಿ ಮಹೋತ್ಸವ ಅದ್ದೂರಿಯಾಗಿ ಜರುಗಿತು.
ಬೆಳಗ್ಗೆ ದೇವಸ್ಥಾನದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ಅಭಿಷೇಕ ಹಾಗು ವಿಶೇಷ ಪೂಜೆ ನೆರವೇರಿಸಲಾಯಿತು. ನಂತರ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ಸಮಾಳ, ನಂದಿಕೋಲು ಹಾಗೂ ವಾದ್ಯಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು.
ಪುರವಂತರು ವಡಪುಗಳು ಮೂಲಕ ಸ್ವಾಮಿಯ ಮಹಿಮೆ ತಿಳಿಸಿದರು. ನಂತರ ದೇವಸ್ಥಾನ ಮುಂದೆ ಅಗ್ನಿಕುಂಡಕ್ಕೆ ಪೂಜೆ ಸಲ್ಲಿಸಿ ಸ್ವಾಮಿಯ ಪಲ್ಲಕ್ಕಿಯೊಂದಿಗೆ ಭಕ್ತರು ಕೆಂಡ ತುಳಿದು ಭಕ್ತಿ ಸಮರ್ಪಿಸಿದರು. ಸೋಮವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ಜರುಗಿತು.