ಬಳ್ಳಾರಿಯ ಎಸ್‌ಎಸ್‌ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಜಲದಿನ ಕಾರ್ಯಕ್ರಮವನ್ನು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಉದ್ಘಾಟಿಸಿದರು. ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ, ಕಾಲೇಜು ಪ್ರಾಚಾರ್ಯ ಡಾ. ಪ್ರಹ್ಲಾದ್ ಚೌದ್ರಿ, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಮುಖ್ಯ ಲೆಕ್ಕಾಧಿಕಾರಿ ವಿನೋದ್ ಕುಮಾರ್, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯನಿರ್ವಾಹಕ ಅಭಿಯಂತರ ಇಂಧುದರ ಇತರರಿದ್ದರು. 
ಬಳ್ಳಾರಿ

ಪ್ರಸ್ತುತ ದಿನಗಳಲ್ಲಿ ಜಲ ಸಂರಕ್ಷಣೆ ಅಗತ್ಯ

ಪ್ರಮುಖ ಮುಖ್ಯಾಂಶಗಳು

  • ಸಂರಕ್ಷಣೆ
ಬಳ್ಳಾರಿ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಜಲ ಸಂರಕ್ಷಿಸುವುದು ಅಗತ್ಯವಾಗಿದೆ ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಹೇಳಿದರು.
ನಗರದ ಸರಳಾದೇವಿ ಸತೀಶ್ಚಂದ್ರ ಆಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಪಂ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗ ಸಹಯೋಗದೊಂದಿಗೆ ಆಯೋಜಿಸಿದ್ದ ವಿಶ್ವ ಜಲ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನೀರನ್ನು ಮಿತವಾಗಿ ಬಳಸಿ, ಮುಂದಿನ ಪೀಳಿಗೆಗಾಗಿ ಅದನ್ನು ಸಂರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ಮಾತನಾಡಿ, ಜಲ ಸಂರಕ್ಷಣೆಯ ಕಾನೂನಾತ್ಮಕ ಅರಿವು ಹಾಗೂ ನೀರಿನ ಮಹತ್ವ ಹೊಂದುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ನೀರು ಮತ್ತು ಲಿಂಗ ಸಮಾನತೆ ಎಲ್ಲಿ ನೀರು ಹರಿಯುತ್ತದೆಯೋ, ಅಲ್ಲಿ ಸಮಾನತೆ ಬೆಳೆಯುತ್ತದೆ ಎಂಬುದು 2026ರ ಸಾಲಿನ ಘೋಷವಾಕ್ಯವಾಗಿದೆ ಎಂದರು.