ಬಳ್ಳಾರಿಯ ರೇಡಿಯೋ ಪಾರ್ಕ್‌ನಲ್ಲಿ ಎಂಜಿಆರ್ ಟ್ರಸ್ಟ್ ವತಿಯಿಂದ ಅಯೋಜಿಸಿದ್ದ ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಬೈಕ್ ಸವಾರರೊಬ್ಬರಿಗೆ ಮಾಜಿ ಸಚಿವ ಬಿ.ಶ್ರೀರಾಮುಲು ಹೆಲ್ಮೆಟ್ ಹಾಕಿದರು. ಕಲ್ಯಾಣ ಮಠದ ಕಲ್ಯಾಣ ಸ್ವಾಮಿಜಿ, ಹೆನ್ರಿ ಡಿಸೋಜಾ, ವಾರ್ಡ್ ಸದಸ್ಯ ಎಂ.ಗೋವಿಂದರಾಜುಲು ಇತರರಿದ್ದರು.
- ದಂಡಕ್ಕೆ ಹೆದರಿ ಹೆಲ್ಮೆಟ್ ಧರಿಸುವುದಲ್ಲ
- ಜೂ1ರಿಂದ ಜಿಲ್ಲಾದ್ಯಂತ ಹೆಲ್ಮೆಟ್ ಕಡ್ಡಾಯ
ಬಳ್ಳಾರಿ : ದಂಡಕ್ಕೆ ಹೆದರಿ ಹೆಲ್ಮೆಟ್ ಧರಿಸುವುದಲ್ಲ, ಜೀವ ರಕ್ಷಣೆಗಾಗಿ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದ ರೇಡಿಯೋ ಪಾರ್ಕ್‌ನಲ್ಲಿ ಎಂಜಿಆರ್ ಟ್ರಸ್ಟ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಿಮ್ಮ ಕುಟುಂಬ ನಿಮ್ಮ ಸುರಕ್ಷಿತವಾಗಿ ಮರಳಿ ಬರುವಿಕೆಗಾಗಿ ಕಾಯುತ್ತಿರುತ್ತಿದೆ ಎಂದರು. ಎಂಜಿಆರ್ ಟ್ರಸ್ಟ್‌ನ ಇಂತಹ ಸೇವಾ ಚಟುವಟಿಕೆಗಳು ಸಮಾಜಕ್ಕೆ ಮಾದರಿಯಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಹೆಲ್ಮೆಟ್‌ಗಳನ್ನು ವಾಹನ ಸವಾರರಿಗೆ ವಿತರಣೆ ಮಾಡಲಾಯಿತು. ನಂತರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜೂ1ರಿಂದ ಜಿಲ್ಲಾದ್ಯಂತ ಹೆಲ್ಮೆಟ್ ಕಡ್ಡಾಯಗೊಳಿಸಿರುವ ಹಿನ್ನೆಲೆ, ಸುರಕ್ಷಿತ ಪ್ರಯಾಣ ಹೆಲ್ಮೆಟ್ ಕಡ್ಡಾಯ ಎಂಬ ಘೋಷಣೆಯೊಂದಿಗೆ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲಾಯಿತು.