ಬಳ್ಳಾರಿಯಲ್ಲಿ ಆಯೋಜಿಸಿದ್ದ ಸ್ವಸ್ಥ ಸೇತು ಆರೋಗ್ಯ ಸೇತುವೆ ಯೋಜನೆಯಡಿ ಸ್ತನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಡಾ.ಸೈಯದ್ ನಾಸೀರ್ ಹುಸೇನ್ ಉದ್ಘಾಟಿಸಿದರು. ಶಾಸಕ ಭರತ್‌ರೆಡ್ಡಿ, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಮೇಯರ್ ಪಿ.ಗಾದೆಪ್ಪ, ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಬಿಮ್ಸ್ ನಿರ್ದೇಶ ಡಾ.ಟಿ.ಗಂಗಾಧರಗೌಡ, ಜಿಲ್ಲಾ ಸರ್ಜನ್ ಡಾ.ಎನ್.ಬಸರೆಡ್ಡಿ, ಡಿಎಚ್‌ಒ ಡಾ.ವೈ.ರಮೇಶಬಾಬು ಇದ್ದರು. == 
ಬಳ್ಳಾರಿ

ಮಹಿಳೆಯರು ತಪಾಸಣೆಗೆ ಒಳಪಡಿ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಪ್ರಾಥಮಿಕ
ಬಳ್ಳಾರಿ : ನಿಯಮಿತ ತಪಾಸಣೆ ಮತ್ತು ಪ್ರಾಥಮಿಕ ಚಿಕಿತ್ಸೆಯಿಂದ ಸ್ತನ ಕ್ಯಾನ್ಸರ್ ತಡೆಗಟ್ಟಬಹುದು ಎಂದು ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಹೇಳಿದರು.
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಸ್ವಸ್ಥ ಸೇತು ಆರೋಗ್ಯ ಸೇತುವೆ ಯೋಜನೆಯಡಿ ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆಯ ಪ್ರಸ್ತಕ ಸಾಲಿನ ವಾರ್ಷಿಕ ಮೌಲ್ಯಮಾಪನ ವರದಿಯ ಯೋಜನೆಯ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 1.50 ಲಕ್ಷ ಮಹಿಳೆಯರು ತಪಾಸಣೆಗೆ ಒಳಪಡಿಸಲಾಗಿದೆ. ಇದರಲ್ಲಿ 42 ಮಹಿಳೆಯರು ಅನುಮಾನಾಸ್ಪದ ಲಕ್ಷಣಗಳೊಂದಿಗೆ ಗುರುತಿಸಲಾಗಿದೆ. ಇವರಲ್ಲಿ 35 ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಅದರಲ್ಲಿ 15 ಜನ ಮಹಿಳೆಯರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 20 ಜನ ಮಹಿಳೆಯರಿಗೂ ಚಿಕಿತ್ಸೆ ನೀಡಲಾಗುವುದು ಎಂದರು.
ಜಿಲ್ಲೆಯ ಮಾದರಿಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಕಾರ್ಯವನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಮತ್ತು ತಾಲೂಕುಗಳಿಗೆ ವಿಸ್ತರಣೆಯ ಕುರಿತು ಮುಂಬರುವ ದಿನಗಳಲ್ಲಿ ಸಿಎಂ ಜತೆ ಚರ್ಚಿಸಲಾಗುವುದು ಎಂದರು.
ಶಾಸಕ ನಾರಾ ಭರತ್‌ರೆಡ್ಡಿ ಮಾತನಾಡಿ, ಹೆಣ್ಣಿನಿಂದಲೇ ಒಂದು ಕುಟುಂಬ ನಿರ್ವಹಣೆ ಸಾಧ್ಯ. ಹೆಣ್ಣಿನ ಆರೋಗ್ಯ ಸರ್ಕಾರದ ಆದ್ಯತೆಯಾಗಿದೆ. ಕ್ಯಾನ್ಸರ್ ತಡೆ ಹಾಗೂ ಆರಂಭದ ಹಂತದಲ್ಲೇ ಕಾಯಿಲೆ ಪತ್ತೆ ಹಚ್ಚುವಿಕೆ ಕುರಿತಂತೆ ಅರಿವು ಹೆಚ್ಚಿಸುವುದು ಮುಖ್ಯವಾಗಿದ್ದು, ಆರಂಭದಲ್ಲೇ ಕಾಯಿಲೆ ಪತ್ತೆ ಹಚ್ಚುವ ವಿಧಾನಗಳ ಬಗ್ಗೆ ಅರಿವು ಮೂಡಿಸುವುದು ತುರ್ತು ಅಗತ್ಯವಾಗಿದೆ ಎಂದರು.
ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ವೈದ್ಯರು ಮತ್ತು ಆಶಾಕಾರ್ಯಕರ್ತೆಯರಿಗೆ ಅಭಿನಂದನಾ ಪ್ರಮಾಣ ಪತ್ರ ವಿತರಿಸಲಾಯಿತು.