ಪ್ರಮುಖ ಮುಖ್ಯಾಂಶಗಳು
ಬಳ್ಳಾರಿ :
ಖಾಸಗಿ ಚಿತ್ರಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಿನ್ನಲೆ ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ನಗರದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಂತರ ಅಜೀಂನ ವರ್ತನೆಯಿಂದ ಬೇಸತ್ತು ಆತನಿಂದ ದೂರವಾಗಿದ್ದ ಫೀರ್ದೋಸ್, ಬಳಿಕ ಆತನ ಸ್ನೇಹಿತ ಸೋಹೈಲ್‌ನೊಂದಿಗೆ ಪ್ರೀತಿಸಿ ಮದುವೆಯಾಗಲು ನಿರ್ಧರಿಸಿದ್ದರು ಎನ್ನಲಾಗಿದೆ.
ಈ ವಿಚಾರ ತಿಳಿದ ಬಳಿಕ ಅಜೀಂ, ತನ್ನ ಬಳಿ ಇರುವ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬೆಳವಣಿಗೆಯಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ಫೀರ್ದೋಸ್ ಆತ್ಮಹತ್ಯೆಗೂ ಮುನ್ನ ವಿಡಿಯೊ ದಾಖಲಿಸಿದ್ದು, ತನ್ನ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಆತ್ಮಹತ್ಯೆಗೆ ಮುನ್ನ ಸೋಹೈಲ್‌ಗೆ ಕರೆ ಮಾಡಿ ನಡೆದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿರುವುದಾಗಿಯೂ ಹೇಳಲಾಗಿದೆ. ಈ ಕುರಿತು ಕೌಲಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.