ಜಿಲ್ಲೆ

ಕೃಷ್ಣಜನ್ಮಾಷ್ಠಮಿ ಮಾಂಸ ಮಾರಾಟಕ್ಕೆ ನಿಷೇಧ


ಹೊಳೆನರಸೀಪುರ: ಶ್ರೀ ಕೃಷ್ಣ ಜನ್ಮಾಷ್ಠಮಿ ದಿನವಾದ ಆ.26 ರಂದು ಪಟ್ಟಣದಲ್ಲಿ ಯಾವುದೇ ರೀತಿಯ ಮಾಂಸ ಮಾರಾಟ ಹಾಗೂ ಹಸಿ ಮೀನು ಮಾರಾಟ ಮಾಡಬಾರದೆಂದು ಪುರಸಭೆ ಮುಖ್ಯಾಧಿಕಾರಿ ಸಿ.ಡಿ.ನಾಗೇಂದ್ರಕುಮಾರ್ ಆದೇಶಿಸಿದ್ದಾರೆ.


ಈ ಬಗ್ಗೆ ಸರ್ಕಾರ ಕೃಷ್ಣಜನ್ಮಾಷ್ಠಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ತಿಳಿಸಿದ್ದಾರೆ. ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು ಎಂದು ತಿಳಿಸಿದ್ದಾರೆ. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.