ಜಿಲ್ಲೆ

ಶಿಕ್ಷಣದೊಂದಿಗೆ ಸಂಸ್ಕೃತಿಯನ್ನೂ ಕಲಿಸಿ,  ಶಾಸಕ ಮಹೇಶ ಟೆಂಗಿನಕಾಯಿ ಸಲಹೆ

Dharwada - Basavaraj Idli

ಹುಬ್ಬಳ್ಳಿ: ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕೃತಿಯನ್ನು ಕಲಿಸುವುದು ಇಂದಿನ ಅಗತ್ಯ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದ ಬಿವಿಬಿ ಆವರಣದ ದೇಶಪಾಂಡೆ ಫೌಂಡೇಷನ್ ಆಡಿಟೋರಿಯಂನಲ್ಲಿ ಏರ್ಪಡಿಸಿದ್ದ ಬಣಗಾರ ಸಮಾಜದ ರಾಷ್ಟ್ರ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಅತಿಥಿಗಳಾಗಿ ಮಾತನಾಡಿದರು.

ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಎಲ್ಲವನ್ನೂ ಬೇಗ ಕಲಿತುಕೊಳ್ಳುತ್ತಾರೆ. ಅವರನ್ನು ಕೇವಲ ಶಿಕ್ಷಿತರನ್ನಾಗಿ ಮಾಡದೇ ಸುಸಂಸ್ಕೃತರನ್ನಾಗಿ ಬೆಳೆಸಬೇಕೆಂದು ಪಾಲಕರಿಗೆ ತಿಳಿಸಿದರು.

ಕೆಎಲ್ಇ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಅವಿನಾಶ ಕವಿ, ಶಿಕ್ಷಣದ ಬಗ್ಗೆ ಉಪನ್ಯಾಸ ನೀಡಿದರು. ಸಾನ್ನಿಧ್ಯ ವಹಿಸಿದ್ದ ಜಗದ್ಗುರು ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಸಮಾಜದವರು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ನಿರಂತರ ನಡೆಯಬೇಕು ಎಂದು ಸಲಹೆ ನೀಡಿದರು.

ಬೆಳಗಾವಿ ಸಂಸದ ಜಗದೀಶ ಶೆಟ್ಟರ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಎಲುಬು ಮತ್ತು ಕೀಲು ತ ಡಾ. ಮೋಹನ ತುಕಾಡೆ, ಹೃದಯರೋಗ ತ ಡಾ. ಶರಣು ಹಳ್ಳದ, ಗ್ಯಾಲ ಇ-ಸಲ್ಯೂಷನ್ ನ ಶಂಕರಲಿಂಗ ಸಿಂಪಿ, ಸೊಲ್ಲಾಪುರದ ವ್ಯಾಪಾರಸ್ಥ ವಿದ್ಯಾಧರ ಶಾಬಾದಿ, ಸಮಾಜದ ಗೌರವಾಧ್ಯಕ್ಷ ಸಿಎ ಸುರೇಶ ಚೆನ್ನಿ, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ರಾಜ್ಯ ಹಾಗೂ ಹೊರರಾಜ್ಯದಿಂದ ಆಗಮಿಸಿದ್ದ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಉನ್ನತ ವ್ಯಾಸಂಗ ಮಾಡಿದ ಹಾಗೂ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಯಿತು.

ಬಣಗಾರ ಸಮಾಜದ ಉಪಾಧ್ಯಕ್ಷ ಮಲ್ಲಿಕಾರ್ಜುನ ಶಿರಗಣ್ಣವರ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಜೋಡಳ್ಳಿ ಸ್ವಾಗತಿಸಿದರು. ಅಧ್ಯ ಅನೀಲ ಕವಿಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸದಸ್ಯ ರಾಜು ಗೊಂಬಿ ವಂದಿಸಿದರು.