ಜಿಲ್ಲೆ

ಬೆಂ.ನಗರ ವಿವಿ: ಎಂಬಿಎ, ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯ 2025-26ನೇ ಸಾಲಿಗೆ ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜು ಕ್ಯಾಂಪಸ್‌ನಲ್ಲಿ ಎಂ.ಬಿ.ಎ. ( ಬೆಳಿಗ್ಗೆ ಮತ್ತು ಸಂಜೆ) ಹಾಗೂ ವಿಶ್ವವಿದ್ಯಾನಿಲಯದ ಬಾಗಲೂರು ಸ್ನಾತಕೋತ್ತರ ಕೇಂದ್ರದಲ್ಲಿ ಎಂಸಿಎ ಕೋರ್ಸ್‌ಗಳಲ್ಲಿ ಉಳಿಕೆ ಸೀಟುಗಳಿಗಾಗಿ ಆಸಕ್ತ ಅರ್ಹ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಆನ್‌ಲೈನ್‌ನಲ್ಲಿ ಅರ್ಜಿಗಳು ಲಭ್ಯವಿದ್ದು, ಅರ್ಜಿ ಸಲ್ಲಿಸಲು ನ.7 ಕೊನೆಯ ದಿನವಾಗಿದೆ. 200 ರೂ. ದಂಡ ಸಹಿತ ಶುಲ್ಕ ಪಾವತಿಸಲು ನ.10ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನ.13 ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ನ.15ರಂದು ಜ್ಯೇಷ್ಠತಾ ಪಟ್ಟಿ ಪ್ರಕಟಿಸಲಾಗುವುದು. ನ.17ರಂದು ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಬಿಸಿಯು ಕುಲಸಚಿವ ಎ. ನವೀನ್ ಜೋಸೆಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.