ಜಿಲ್ಲೆ

ಪ್ರೀತಿಸಿ ಮದುವೆಯಾಗಿದ್ದ ಹುಡುಗಿ ಮಸಣ ಸೇರಿದಳು! ಇಷ್ಟಕ್ಕೆಲ್ಲ ಕಾರಣವಾಗಿದ್ದು ಒಂದು ಮೊಬೈಲ್​

ಹೊಸಕೋಟೆ: ಕ್ಷುಲ್ಲಕ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಜಗಳ ನಡೆದಿದ್ದು, ಗಂಡ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.

ರಘು ಹೆಸರಿನ ವ್ಯಕ್ತಿ ಸುಶ್ಮಿತಾ (23)ಳನ್ನು 7 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಮದುವೆಯಾದ ನಂತರ ಇಬ್ಬರು ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಶನಿವಾರ ರಾತ್ರಿ ಸುಖ ಸಂಸಾರ ನಡೆಸುತ್ತಿದ್ದರು. ಶನಿವಾರ ರಾತ್ರಿ ದಂಪತಿಯ ನಡುವೆ ಮೊಬೈಲ್​ ವಿಚಾರಕ್ಕೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿದೆ. ಸಿಟ್ಟು ಹೆಚ್ಚಾದ ಕಾರಣ ರಘು ಹೆಂಡತಿ ಕುತ್ತಿಗೆಯನ್ನು ಬರ್ಬರವಾಗಿ ಕೊಯ್ದಿದ್ದಾನೆ. ಹೆಂಡತಿಯ ಜೀವ ಹೋಗಿದೆ ಎಂದು ಗೊತ್ತಾದ ಮೇಲೆ ಅಲ್ಲಿಂದ ಪರಾರಿಯಾಗಿದ್ದಾನೆ. ಈ ವಿಚಾರವಗಿ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. (ದಿಗ್ವಿಜಯ ನ್ಯೂಸ್​)