ಜಿಲ್ಲೆ

ಬೆಂಗಳೂರು ವಿವಿಯಿಂದ ನಾಳೆ ಮಾಜಿ ಪ್ರಧಾನಿ ದೇವೇಗೌಡ, ಇಸ್ರೋ ಸೋಮನಾಥ್​ಗೆ ಗೌರವ ಡಾಕ್ಟರೇಟ್

ಬೆಂಗಳೂರು: ನಾಳೆ ಬೆಂಗಳೂರು ನಗರ ವಿವಿಯ 58 ನೇ ಘಟಿಕೋತ್ಸವದಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಿದೆ.

ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವವನ್ನು ಅಕ್ಟೋಬರ್ 17ರ ಮಂಗಳವಾರ ಬೆಳಗ್ಗೆ 10.30ಕ್ಕೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸೆಂಟ್ರಲ್ ಕಾಲೇಜ್ ಅವರಣದ ಜ್ಯಾನಜ್ಯೋತಿ ಸಭಾಂಗಣದ ಬೋರ್ಡ್ ರೂಮ್​ನಲ್ಲಿ ಬೆಂಗಳೂರು ವಿವಿ ಕುಲಪತಿ ಜಯಕರ ಶೆಟ್ಟಿ ಪತ್ರಿಕಾಗೊಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿ, ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಈ ವರ್ಷ ಇಬ್ಬರು ಸಾಧಕರಿಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗುತ್ತೆ ಎಂದು ತಿಳಿಸಿದರು.

ಈ ಬಗ್ಗೆ ಮಾಹಿತಿ ನೀಡಿರುವ ವಿವಿಯ ಕುಲಪತಿ ಜಯಕರ, ಎಸ್.ಎಂ, ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರಿಗೂ ಈ ಬಾರಿಯ ಗೌರವ ಡಾಕ್ಟರೇಟ್‌ ನೀಡಲಾಗುತ್ತಿದೆ. ಜ್ಞಾನ ಜ್ಯೋತಿ ಆಡಿಟೋರಿಯಂ‌ನಲ್ಲಿ ಘಟಿಕೋತ್ಸವ ನಡೆಯುವ ಕಾರ್ಯಕ್ರಮಕ್ಕೆ ಝೆರೋದಾ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಮುಖ್ಯ ಅತಿಥಿಯಾಗಿ ಭಾಗಿವಹಿಸಲಿದ್ದಾರೆ.

8ನೇ ವಾರ್ಷಿಕ ಘಟಿಕೋತ್ಸವದಲ್ಲಿ 28,871 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ಸ್ನಾತಕ ಪದವಿಯಲ್ಲಿ ಒಟ್ಟು 104 ಚಿನ್ನದ ಪದಕ ನೀಡಲಾಗುತ್ತೆ. ಸ್ನಾತಕೋತ್ತರ ಪದವಿಯಲ್ಲಿ 195 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಾಗುತ್ತೆ. ಒಟ್ಟು 299 ಚಿನ್ನದ ಪದಕ ನೀಡಲಾಗುತ್ತೆ ಎಂದು ಬೆಂಗಳೂರು ವಿವಿ ಕುಲಪತಿ ಜಯಕರ ಶೆಟ್ಟಿ ತಿಳಿಸಿದರು.

ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಸೆ. 29 ರಂದು ನಡೆಯಬೇಕಿತ್ತು. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಘಟಿಕೋತ್ಸವವನ್ನು ಮುಂದೂಡಲಾಗಿತ್ತು. ಇದೀಗ ಈ ಕಾರ್ಯಕ್ರಮ ನಾಳೆ ನಡೆಯಲಿದೆ ಎನ್ನುವ ಮಾಹಿತಿಯನ್ನು ವಿವಿಯ ಕುಲಪತಿ ಜಯಕರ ಅವರು ಹಂಚಿಕೊಂಡಿದ್ದಾರೆ.