ಜಿಲ್ಲೆ

ರೆಡ್‌ಕ್ರಾಸ್ ಸೆಂಟಿನರಿ ಕಟ್ಟಡಕ್ಕೆ ಬ್ಯಾಂಕ್ ಆಫ್ ಇಂಡಿಯಾದಿಂದ 10 ಲಕ್ಷ ರೂ. ನೆರವು

ಮಂಗಳೂರು : ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ವತಿಯಿಂದ ನಿರ್ಮಾಣವಾಗುತ್ತಿರುವ ರೆಡ್‌ಕ್ರಾಸ್ ಸೆಂಟಿನರಿ ಕಟ್ಟಡಕ್ಕೆ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ 10 ಲಕ್ಷ ರೂ. ಸಹಾಯಧನ ನೀಡಲಾಗಿದೆ. ಬ್ಯಾಂಕ್ ಆಫ್ ಇಂಡಿಯಾದ ಎಂಡಿ ಹಾಗೂ ಸಿಇಒ ಅತನು ಕುಮಾರ್ ದಾಸ್ ಅವರು ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎಂ ಶಾಂತರಾಮ ಶೆಟ್ಟಿ ಅವರಿಗೆ ಚೆಕ್ ಹಸ್ತಾಂತರಿಸಿದರು. ದ.ಕ.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ವಿವೇಕಾನಂದ ದುಬೆ ಉಪಸ್ಥಿತರಿದ್ದರು.