ಮುಳಬಾಗಿಲು: ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯ ದಿವಾಳಿಯಾಗಿದೆ. ಈಗ ಪರೋವಾಗಿ 5 ಗ್ಯಾರಂಟಿಗಳನ್ನು ನಿಲ್ಲಿಸುವ ಹುನ್ನಾರ ನಡೆಸಿದೆ ಎಂದು ವಿಧಾನ ಪರಿಷತ್ ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ ದೂರಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಭಾನುವಾರ ನಗರಕ್ಕೆ ಆಗಮಿಸಿದ್ದ ಅವರು ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಲ್ಲಸಲ್ಲದ ನೆಪಗಳ ಹೆಸರಿನಲ್ಲಿ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡುತ್ತಿದ್ದು, ಇದೊಂದು ಲೂಟಿ ಸರ್ಕಾರ ಎಂದು ಜರಿದರು.
ಆಹಾರ ಸಚಿವರಿಗೆ ಸರ್ಕಾರದಲ್ಲಿ ಹೆಚ್ಚಿನ ಆಹಾರ ಸಿಗುತ್ತಿಲ್ಲ, ಆದ್ದರಿಂದ ಪಡಿತರ ಕಾರ್ಡ್ಗಳನ್ನು ರದ್ದುಪಡಿಸಿ ಬಾಚಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಆರೋಪಿಸಿದರು.
ಶಾಸಕರ ಖರೀದಿಗೆ ಹಣ ಕೊಡುವವರು ಯಾರು? ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಶಾಸಕರು ಮಾಡಿರುವ ಆರೋಪ ಸತ್ಯಕ್ಕೆ ದೂರ, <50 ಕೋಟಿ ಅಲ್ಲಾ 5 ಕೋಟಿ ಕೊಡುವರು ಯಾರು ಅಂತ ಹೆಸರು ಬಹಿರಂಗಪಡಿಸಬೇಕು. ಸುಳ್ಳು ಹೇಳುವುದೇ ಕೈ ನಾಯಕರ ಕೆಲಸ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಗ್ಯಾರಂಟಿಗಳನ್ನು ಪರಿಷ್ಕರಣೆ ಮಾಡಲಾಗುವುದು ಎಂದ ಬೆನ್ನಲ್ಲೇ ಎಐಸಿಸಿ ಅಧ್ಯ ಮಲ್ಲಿಕಾರ್ಜುನ ರ್ಖಗೆ, ಸಿಎಂ ಮತ್ತು ಡಿಸಿಎಂ ಹಾಗೂ ಸಚಿವರ ಸಭೆ ನಡೆಸಿ ಮಹಾರಾಷ್ಟ್ರ ಸೇರಿ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಗ್ಯಾರಂಟಿ ನೀಡಿದ್ದು,
ಚುನಾವಣೆ ಮುಗಿಯುವರೆಗೂ ಈ ಬಗ್ಗೆ ಪ್ರಸ್ತಾವನೆ ಎತ್ತಬೇಡಿ ಎಂಬ ಕಟ್ಟಪ್ಪಣೆ ಮಾಡಿದ್ದಾರೆ. ಅದು ಮುಗಿಯುವುದಕ್ಕೆ ಮೊದಲೇ ರೇಷನ್ಕಾರ್ಡ್ ಕಿತ್ತುಕೊಳ್ಳುವ ಪ್ರಯತ್ನ ನಡೆದಿದೆ. ಚುನಾವಣೆ ಮುಗಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಇರುವುದಿಲ್ಲ ಎಂದರು.
ವಕ್ಫ್ ಕಾಯ್ದೆ ರದ್ದು ಮಾಡಲಿ
ಕೇಂದ್ರದಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕಿಗಾಗಿ ವಕ್ಫ್ ಕಾಯ್ದೆ ಮಾಡಿದ್ದಾರೆ. ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ, ನರಸಿಂಹರಾವ್ ಅಧಿಕಾರದಲ್ಲಿದ್ದಾಗ ಈ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಮುಸ್ಲಿಂಪರ ಎಂದು ಬಿಂಬಿಸಿದ್ದಾರೆ. ಇದರಿಂದ ಈಗ ಇಲ್ಲಿನ ಮೂಲ ನಿವಾಸಿಗಳಿಗೆ ಹಾಗೂ ಕೃಷಿ ಮಾಡುತ್ತಿದ್ದ ರೈತರಿಗೆ ಧಕ್ಕೆಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಚಳಿಗಾಲದ ಸಂಸತ್ ಆಧಿವೇಶನದಲ್ಲಿ ಈ ವಕ್ಫ್ ಕಾಯ್ದೆಯನ್ನು ರದ್ದುಪಡಿಸಲು ಮುಂದಾಗಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು.