ಜಿಲ್ಲೆ

ನಿಷೇಧಿತ ಪ್ಲಾಸ್ಟಿಕ್‌ ಬ್ಯಾಗ್‌ಗಳು ವಶಕ್ಕೆ

Uttara Kannada - Subash Hegde

ಕಾರವಾರ:ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸ್ಥಳೀಯ ನಗರಸಭೆ ಅಧಿಕಾರಿಗಳು ದಾಂಡೇಲಿ ನಗರದಲ್ಲಿ ಮಂಗಳವಾರ 7 ಅಂಗಡಿಗಳ ಮೇಲೆ ದಾಳಿ ನಡೆಸಿ 125 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದಾರೆ.
ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್, ದಾಂಡೇಲಿ ನಗರಸಭೆ ಎಇಇ ಅಭಯಕುಮಾರ ಹಾಗೂ ಸಿಬ್ಬಂದಿ ದಾಳಿ ನಡೆಸಿ, 11,600 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್ ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಪ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್‌ಗಳು, ಪ್ಲಾಸ್ಟಿಕ್ ಸ್ಪೂನ್‌ಗಳು, ಅಂಟಿಕೊಳ್ಳುವ ಫಿಲಂಗಳು, ಎಲ್ಲ ದಪ್ಪದ ಡೈನಿಂಗ್ ಟೇಬಲ್ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟಾಂಗಳು, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ಉಪಯೋಗಿಸದಂತೆ ಎಚ್ಚರಿಸಿದರು.