ಬಂಟ್ವಾಳ: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬಂಟ್ವಾಳದಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಶಂಕಿಸಲಾಗಿದೆ. ಮಹಿಳೆಯ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯನ್ನು ರೈಲ್ವೆ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ.ಅವಳ ಆಧಾರ್ ಕಾರ್ಡ್ ನಲ್ಲಿ ಈ ಮಾಹಿತಿ ಲಭ್ಯವಾಗಿದೆ.ಬಿ.ಸಿ.ರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲು ಹಾದು ಹೋಗುತ್ತಿರುವಂತೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಅವಳು ಕುಳಿತು ಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿ.ಸಿ.ರೋಡಿನ ಕಚೇರಿಗೆ ನೀಡಿದ್ದಾರೆ. ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಈಜುಗಾರರಾದ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.