ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ 155ನೇ ಜಯಂತಿ ಹಿನ್ನೆಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರೌಢಶಾಲೆ, ಪಪೂ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಾಗಿ ನಡೆದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.
ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಸೀಮಾ ಚಪ್ಪರಬಂದ್ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕ್ರಮವಾಗಿ 31,000 ರೂ., 21,000 ರೂ. ಹಾಗೂ 11,000 ರೂ. ನಗದು ಹಾಗೂ ಪ್ರಮಾಣಪತ್ರ ನೀಡಲಾಗುವುದು. ಪ್ರೌಢಶಾಲೆ ವಿಭಾಗದಲ್ಲಿ 1,24,392 ವಿದ್ಯಾರ್ಥಿಗಳು, ಪಿಯುಸಿ ವಿಭಾಗದಲ್ಲಿ 12,840 ವಿದ್ಯಾರ್ಥಿಗಳು, ಕಾಲೇಜು ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ 17,062 ವಿದ್ಯಾರ್ಥಿಗಳು ಸೇರಿ ಒಟ್ಟು 1,54,294 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಎಂದು ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.