ಜಿಲ್ಲೆ

ಮಾ.1, 2ಕ್ಕೆ ವಕೀಲರ ಸಂಘ ರಾಜ್ಯಮಟ್ಟದ ಪಂದ್ಯಾಟ

ಉಡುಪಿ: ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125 ನೇ ವರ್ಷದ ಶತಮಾನೋತ್ಸವ ರಜತ ಮಹೋತ್ಸವದ ಅಂಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ಮಾ. 1 ಮತ್ತು 2 ರಂದು ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್​ ಪ್ರವಿಣ್​ ಕುಮಾರ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಂಜಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ ಕ್ರಿಕೆಟ್​, ವಾಲಿಬಾಲ್​ (ಪುರುಷರಿಗೆ), ತ್ರೋಬಾಲ್​ (ಮಹಿಳೆಯರಿಗೆ) ಮತ್ತು ಶಟಲ್​ ಬ್ಯಾಡ್ಮಿಂಮಿಟನ್​ (ಪುರುಷ ಮಹಿಳೆಯರಿಗೆ) ಪಂದ್ಯಾಟಗಳನ್ನು ನಡೆಸಲಾಗುತ್ತಿದೆ. ಇದೇ ಪ್ರಥಮ ಬಾರಿಗೆ ಹೊನಲು ಬೆಳಕಿನಲ್ಲಿ ಪುರುಷರ ಕ್ರಿಕೆಟ್​ ಪಂದ್ಯಾಟವನ್ನು ನಡೆಸಲಾಗುತ್ತಿದೆ ಎಂದರು.

ಉದ್ಘಾಟನೆ

ಪಂದ್ಯಾಕೂಟವನ್ನು ಮಾ. 1 ರ ಸಾಯಂಕಾಲ 4 ಗಂಟೆಗೆ ಸುಪ್ರೀಂಕೋರ್ಟಿನ ನ್ಯಾಯಧೀಶೆ ನ್ಯಾ. ಬಿ.ವಿ.ನಾಗರತ್ನ ಉದ್ಘಾಟಿಸಲಿದ್ದಾರೆ. ಕರ್ನಾಟಕ ಹೈಕೋರ್ಟಿನ ನ್ಯಾಯಾಲಯದ ಮುಖ್ಯ ನ್ಯಾಯಧೀಶ ನ್ಯಾ. ಎನ್​.ವಿ. ಅಂಜಾರಿಯಾ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ನ್ಯಾ. ಇ.ಎಸ್​.ಇಂದಿರೇಶ್​, ಕರ್ನಾಟಕ ಹೈಕೋರ್ಟಿನ ನ್ಯಾಯಾಧೀಶ ನ್ಯಾ. ರಾಜೇಶ್​ ರೈ ಕೆ., ಮಾಹೆ ಸಹ ಕುಲಾಧಿಪತಿ ಡಾ.ಎಚ್​.ಎಸ್​.ಬಲ್ಲಾಳ್​ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್​ ಎಸ್​. ಗಂಗಣ್ಣವರ್​ ಉಪಸ್ಥಿತರಿರಲಿದ್ದಾರೆ ಎಂದರು.

ಸಮಾರೋಪ

ಮಾ.2 ರಂದು ಸಾಯಂಕಾಲ 7 ಗಂಟೆಗೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್​ ಸದಸ್ಯ ಪಿ.ಪಿ. ಹೆಗ್ಡೆ ಸಮಾರೋಪ ಭಾಷಣ ಮಾಡಲಿದ್ದಾರೆ. ಉಡುಪಿ-&ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಲಿರುವರು. ಶಾಸಕ ಯಶ್ಪಾಲ್​ ಸುವರ್ಣ ಅತಿಥಿಯಾಗಿ ಭಾಗವಹಿಸಲಿರುವರು ಎಂದು ನುಡಿದರು.

ಈ ಸಂದರ್ಭದಲ್ಲಿ ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಕಿರಣ್​.ಎಸ್​.ಗಂಗಣ್ಣನವರ್​ ಹಾಗು ಉಡುಪಿಯ ಪ್ರಧಾನ ಹಿರಿಯ ಸಿವಿಲ್​ ನ್ಯಾಯಧೀಶ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಪುರುಷೋತ್ತಮ್​ ಎಂ. ಬಿಡುಗಡೆಗೊಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಹಿರಿಯ ಸಿವಿಲ್​ ನ್ಯಾಯಿಕ ದಂಡಾಧಿಕಾರಿ ಸಂತೋಷ್​ ಶ್ರೀವತ್ಸ, ಹಿರಿಯ ವಕೀಲ ಮಟ್ಟಾರ್​ ರತ್ನಾಕರ್​ ಹೆಗ್ಡೆ, ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್​ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ್​ ಎ.ಆರ್​., ಸಾಂಸತಿಕ ಕಾರ್ಯದರ್ಶಿ ಸಂತೋಷ್​ ಕುಮಾರ್​ ಮೂಡುಬೆಳ್ಳೆ, ಕ್ರೀಡಾ ಕಾರ್ಯದರ್ಶಿ ಸುಮಿತ್​ ಎಸ್​ ಹೆಗ್ಡೆ, ಖಜಾಂಚಿ ಗಂಗಾಧರ ಎಚ್​.ಎಂ., ಜಂಟಿ ಕಾರ್ಯದರ್ಶಿ ರವೀಂದ್ರ ಬೈಲೂರು ಮೊದಲಾದವರು ಉಪಸ್ಥಿತರಿದ್ದರು.