ಜಿಲ್ಲೆ

ಬಾರ್ ಅಸೋಸಿಯೇಶನ್ ಕಾರ್ಯ ಮಾದರಿ

ಇಂದಿರಾ ಎನ್ ಕೆ

ಕುಂದಾಪುರ: ಕುಂದಾಪುರ ಬಾರ್ ಅಸೋಸಿಯೇಶನ್ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಸಮಾಜಕ್ಕೆ ಪೂರಕವಾಗಿರುತ್ತವೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ ಟಿ. ಹೇಳಿದರು.

ಕುಂದಾಪುರ ನ್ಯಾಯಾಲಯದ ಆವರಣ ಎದುರು ಶನಿವಾರ ಕುಂದಾಪುರ ಬಾರ್ ಅಸೋಸಿಯೇಶನ್ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಹಂದಟ್ಟು ಪ್ರಮೋದ್ ಹಂದೆ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಗಂಗಣ್ಣನವರ್, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಕೀಲರನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನ್ಯಾಯಾಲಯದ ಸಿಬ್ಬಂದಿ ರವಿ ಅವರನ್ನು ಗೌರವಿಸಲಾಯಿತು.

ಪ್ರಧಾನ ಕಾರ‌್ಯದರ್ಶಿ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ, ಉಪಾಧ್ಯಕ್ಷ ಸಂದೇಶ್ ಕುಮಾರ್ ಶೆಟ್ಟಿ, ಜತೆ ಕಾರ‌್ಯದರ್ಶಿ ಜೆ.ಗೋವಿಂದ ನಾಯ್ಕ, ಕೋಶಾಧಿಕಾರಿ ಐ.ನಾಗರಾಜ್ ರಾವ್ ಮತ್ತಿತರರು ಉಪಸ್ಥಿತರಿದ್ದರು. ಜೆ.ಶ್ರೀನಾಥ್ ರಾವ್ ಸ್ವಾಗತಿಸಿದರು. ಟಿ.ಬಿ.ಶೆಟ್ಟಿ ಪ್ರಸ್ತಾವನೆಗೈದರು. ಸಂತೋಷ್ ಕುಮಾರ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ರಾಘವೇಂದ್ರ ಚರಣ್ ನಾವಡ ನಿರೂಪಿಸಿದರು. ಸಭಾ ಕಾರ‌್ಯಕ್ರಮದ ಬಳಿಕ ವಕೀಲರು ಹಾಗೂ ಅವರ ಕುಟುಂಬಸ್ಥರಿಂದ ಯಕ್ಷಗಾನ ಪ್ರದರ್ಶನಗೊಂಡಿತು.