ದಾವಣಗೆರೆ: ಖಾಸಗಿ ಬಸ್ವೊಂದರ ಅಪಘಾತದಿಂದಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿದ್ದಾರೆ. ದಾವಣಗೆರೆಯ ಅರುಣಾ ಟಾಕೀಸ್ ವೃತ್ತದಲ್ಲಿ ಈ ಅಪಘಾತ ಸಂಭವಿಸಿದೆ.
ಬಾರ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ (50) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ನಡೆದು ಸಾಗುತ್ತಿದ್ದ ಇವರ ತಲೆ ಮೇಲೇ ಬಸ್ನ ಟಯರ್ ಸಾಗಿ ಹೋಗಿದ್ದು, ಇವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈ ಅಪಘಾತದಿಂದ ವ್ಯಕ್ತಿ ಮೃತಪಟ್ಟಿದ್ದಕ್ಕೆ ಸಾರ್ವಜನಿಕರು ರೊಚ್ಚಿಗೆದ್ದು, ಬಸ್ನ ಗಾಜು ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಪ್ರತಿಭಟನೆಯಿಂದಾಗಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಸ್ಥಳಕ್ಕೆ ಎಸ್ಪಿ ಆಗಮಿಸಬೇಕು ಎಂದು ಸಾರ್ವಜನಿಕರು ಪಟ್ಟುಹಿಡಿದರು. ಬಳಿಕ ಪೊಲೀಸರು ಸಾರ್ವಜನಿಕರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.