ಬೆಂಗಳೂರು: ನಾಡೋಜ ಡಾ. ಬರಗೂರು ಪ್ರತಿಷ್ಠಾನವು 2023 ಮತ್ತು 2024ನೇ ಸಾಲಿನ ‘ಬರಗೂರು ಪ್ರಶಸ್ತಿ’ ಪ್ರಕಟಿಸಿದ್ದು, ವಿಮರ್ಶಕ ಬಸವರಾಜ ಕಲ್ಗುಡಿ, ನಟಿ ಸುಧಾರಾಣಿ ಸೇರಿ ನಾಲ್ವರು ಆಯ್ಕೆಯಾಗಿದ್ದಾರೆ.
ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹಾಗೂ ಸಾಹಿತಿ ಕರೀಗೌಡ ಬೀಚನಹಳ್ಳಿ ಅವರೂ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೃಜನಶೀಲ ಕ್ಷೇತ್ರಗಳಾದ ಸಾಹಿತ್ಯ ಮತ್ತು ಸಿನಿಮಾದಲ್ಲಿ ಸಾಧನೆ ಮಾಡಿದ ತಲಾ ಒಬ್ಬರಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಡಿ. 23ರಂದು ಸಂಜೆ 5 ಗಂಟೆಗೆ ನಗರದ ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ. ಸಾಹಿತಿ ಹಂ.ಪ. ನಾಗರಾಜಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಎ.ವಿ. ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.