ಗುರುಗುಂಟಾ: ಬಾರಿಗಿಡದೊಡ್ಡಿ ಸ.ಕಿ.ಪ್ರಾ. ಶಾಲೆಗೆ ಹಸಿರು ಮತ್ತು ನೈರ್ಮಲ್ಯ ಶಾಲೆ ಪ್ರಶಸ್ತಿ ಲಭಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ನವರು ಪ್ರಶಸ್ತಿಗೆ ಶಾಲೆಯನ್ನು ಆಯ್ಕೆ ಮಾಡಿದ್ದಾರೆ. ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ಪ್ರಶಸ್ತಿ ನೀಡಲಾಗುತ್ತಿದೆ. ಶಾಲೆ ಆವರಣ ಹಸಿರಿನಿಂದ ಕಂಗೊಳಿಸುತ್ತಿದ್ದು, ತಾಲೂಕಿನಲ್ಲಿಯೇ ಮಾದರಿ ಶಾಲೆಯಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಶಾಲೆ ಹೆಸರುವಾಸಿಯಾಗಿದೆ.