ಬೈಲುಕುಪ್ಪೆ ಬಸವೇಶ್ವರ ದೇವಸ್ಥಾನದ ಅವರಣದಲ್ಲಿ ಬಸವ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು. 
ಜಿಲ್ಲೆ

ಬಸವೇಶ್ವರ ದೇಗುಲದಲ್ಲಿ ಪೂಜೆ

ನಾಗೇಶ ಎಸ್

ಬೈಲುಕುಪ್ಪೆ: ಬಸವ ಜಯಂತಿ ಪ್ರಯುಕ್ತ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಬಿಎಂ ರಸ್ತೆ ಪಕ್ಕದಲ್ಲಿರುವ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರ ಯುವಕ ಸಂಘದ ವತಿಯಿಂದ ಮುಂಜಾನೆಯಿಂದಲೇ ದೇವಸ್ಥಾನದ ಸುತ್ತ ಸ್ವಚ್ಛಗೊಳಿಸಿ ತಳಿರು, ತೋರಣ, ವಿವಿಧ ಹೂಗಳಿಂದ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಅರ್ಚಕ ನಿಖಿಲ್ ಅವರು ವಿಶೇಷ ಪೂಜೆ ನೆರವೇರಿಸಿದರು. ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಬಸವೇಶ್ವರ ಯುವಕ ಸಂಘದ ಗೌರವಾಧ್ಯಕ್ಷ ಟಿ.ಗೋವಿಂದ, ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಸ್ವಾಮಿ, ರಾಮಕೃಷ್ಣ, ಸುಜನ್, ಗ್ರಾಮಸ್ಥರು ಇದ್ದರು.