ಜಿಲ್ಲೆ

ಮೈಸೂರು ನಗರದ ವಿವಿಧೆಡೆ ಬಸವ ಜಯಂತಿ ಆಚರಣೆ

ಜಿಲ್ಲಾಡಳಿತ, ವೀರಶೈವ-ಲಿಂಗಾಯತ, ಬಸವ ಬಳಗ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಬುಧವಾರ ನಗರದಲ್ಲಿ ಬಸವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ನಗರದ ಗನ್‌ಹೌಸ್ ವೃತ್ತದ ಬಳಿ ಇರುವ ಶ್ರೀಬಸವೇಶ್ವರ ಪ್ರತಿಮೆಗೆ ಜಿಲ್ಲಾಡಳಿತ, ವಿವಿಧ ಮಠಗಳ ಮಠಾಧೀಶರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗೂ ರಾಜಕೀಯ ಮುಖಂಡರು ಮಾಲಾರ್ಪಣೆ ಮಾಡಿದರು.

ಶ್ರೀ ಚಿದಾನಂದ ಸ್ವಾಮೀಜಿ, ಶಾಸಕರಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ಕೆ.ಹರೀಶ್‌ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮಂಜೇಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಸಿಇಒ ಎನ್.ಯುಕೇಶ್‌ಕುಮಾರ್, ಶರಣ ಸಾಹಿತ್ಯ ಪರಿಷತ್ತಿನ ಮೈಸೂರು ನಗರ ಘಟಕದ ಅಧ್ಯಕ್ಷ ಮ.ಗು. ಸದಾನಂದಯ್ಯ, ಕನ್ನಡ ಸಾಹಿತ್ಯ ಕಲಾ ಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಕನ್ನಡಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಇತರರಿದ್ದರು.

ಮೈಸೂರು ನಗರ ಮತ್ತು ಗ್ರಾಮಾಂತರ ಘಟಕದಿಂದ ಶ್ರೀ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಶಾಸಕ ಕೆ.ಹರೀಶ್‌ಗೌಡ, ಎಂಎಲ್‌ಸಿ ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಸೋಮಶೇಖರ್, ಶ್ರೀಧರ್, ಮಂಚೇಗೌಡನ ಕೊಪ್ಪಲು ರವಿ, ಆಶ್ರಯ ಸಮಿತಿ ಸದಸ್ಯರಾದ ಗುಣಶೇಖರ್, ಕೋಚನಹಳ್ಳಿ ಶಿವರಾಜು, ರವಿಶಂಕರ್, ವಿನಯ್ ಕುಮಾರ್, ರಾಕೇಶ್, ಪಂಪಾಪತಿ ಇತರರಿದ್ದರು.

ಬಸವ ಜಯಂತಿ ಪ್ರಯುಕ್ತ ಚಾಮುಂಡಿಪುರಂ ವೃತ್ತದಲ್ಲಿ ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಜ್ಜಿಗೆ ವಿತರಣೆ ಮಾಡಲಾಯಿತು. ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್ ಕುಮಾರ್, ಮುಖಂಡರಾದ ಎಸ್.ಬಿ.ವಾಸುದೇವಮೂರ್ತಿ ,ಆರ್. ಎಸ್.ಸತ್ಯನಾರಾಯಣ, ಎಸ್.ಕೆ .ಜಗದೀಶ್, ಯೋಗೇಶ್ ಯಾದವ್, ನಾಗೇಂದ್ರ, ನಾಗರಾಜ್, ಮಂಜು, ರವಿ ಇತರರಿದ್ದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ(ದಾದಾ ಸಾಹೇಬ್ ಡಾ.ಎನ್.ಮೂರ್ತಿ ಸ್ಥಾಪಿತ) ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ಗನ್‌ಹೌಸ್ ಬಳಿ ಇರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ಜಿಲ್ಲಾಧ್ಯಕ್ಷ ಶಂಕರ್, ತಿ.ನರಸೀಪುರ ತಾಲೂಕು ಅಧ್ಯಕ್ಷ ಬಲ್ಲಯ್ಯ, ಹುಣಸೂರು ತಾಲೂಕು ಅಧ್ಯಕ್ಷ ಶ್ರೀನಿವಾಸ್, ಎಚ್.ಡಿ.ಕೋಟೆ ತಾಲೂಕು ಅಧ್ಯಕ್ಷ ಗಂಗಡ ಹೊಸಳ್ಳಿ ರಾಜು ಗಂಗಪ್ಪ , ಧರ್ಮರಾಜು ಮತ್ತಿತರರಿದ್ದರು.

ಮೈಸೂರು ತಾಲೂಕು ಹುಯಿಲಾಳು ಗ್ರಾಮದ ಶ್ರೀ ಮನೆ ಮಂಚಮ್ಮ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಬಸವ ಜಯಂತಿ ಪ್ರಯುಕ್ತ ಗನ್‌ಹೌಸ್ ಬಳಿಯ ಶ್ರೀ ಬಸವೇಶ್ವರ ಪ್ರತಿಮೆಗೆ ಬುಧವಾರ ಟ್ರಸ್ಟ್ ಅಧ್ಯಕ್ಷ ಹುಯಿಲಾಳು ರಾಮಸ್ವಾಮಿ ಮಾಲಾರ್ಪಣೆ ಮಾಡಿದರು. ನಗರ ಕಾಂಗ್ರೆಸ್ ಕಾರ್ಯದರ್ಶಿ ಹರೀಶ್ ರೆಡ್ಡಿ, ವಕೀಲ ಕೆ.ಎಸ್.ಅಂದಾನಿ, ಮುಖಂಡರಾದ ಹುಯಿಲಾಳು ಬಿ.ಎಸ್.ರಾಜು, ತೋಷಿತ್ ರಾಮಸ್ವಾಮಿ ಇದ್ದರು.