ಜಿಲ್ಲೆ

ತೊಂಡವಾಡಿಯಲ್ಲಿ ಬಸವೇಶ್ವರ ಭಾವಚಿತ್ರ ಮೆರವಣಿಗೆ


ಚಾಮರಾನಗರ: ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗ್ರಾಮದಲ್ಲಿ ಬಸವೇಶ್ವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಗ್ರಾಮದ ಬಸವೇಶ್ವರ ದೇವಾಲಯದ ಬಳಿಯಿಂದ ಅಲಂಕೃತ ವಾಹನದಲ್ಲಿ ಬಸವೇಶ್ವರರ ಭಾವಚಿತ್ರ ಇರಿಸಿ ಸತ್ತಿಗೆ-ಸೂರಪಾನಿ ಹಾಗೂ ಮಂಗಳವಾದ್ಯಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಎಲ್ಲ ಜನಾಂಗಗಳ ಮುಖಂಡರು, ಯುವಕರು ಪಾಲ್ಗೊಂಡಿದ್ದರು.