ಬಾಗಲಕೋಟೆ: ಭಾರತೀಯ ಸಂವಿಧಾನದ ಅರಿವೂ ವಿದ್ಯಾರ್ಥಿಗಳಿಗೆ ಅಗತ್ಯವಾಗಿದೆ. ಪ್ರಜಾಪ್ರಭುತ್ವದ ಘಟನೆ ಎಲ್ಲರು ಕಾಪಾಡಬೇಕು ಎಂದು ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್ ಮೂಗನೂರಮಠ ಹೇಳಿದರು.
ನಗರದ ಬಿವಿವಿ ಸಂಘದ ಕಲಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ರಾಜ್ಯ ಶಾಸ್ತ್ರ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕಗಳ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಂವಿಧಾನ ಪಿಠಿಕೆ ಓದುವ ಮೂಲಕ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ಸೆ.೧೫ ೨೦೦೭ ರಂದು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸುವ ಸಲುವಾಗಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಘೋಷಿಸಿತು. ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸುವ ರೀತಿಯಲ್ಲಿ ದಿನವನ್ನು ಆಚರಿಸಲಾಗುತ್ತಿದೆ. ಮಾನವ ಹಕ್ಕುಗಳ ಸ್ವಾತಂತ್ರ‍್ಯ ಮತ್ತು ಗೌರವದ ಮೌಲ್ಯಗಳು ಪ್ರಜಾಪ್ರಭುತ್ವದ ಪ್ರಮುಖ ಆಂಶಗಳಾಗಿದ್ದು, ಭಾರತೀಯ ಸಂವಿಧಾನ ಮತ್ತು ಮೂಲಬೂತ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಡಾ.ಅಪ್ಪು ರಾಥೋಡ ಮಾತನಾಡಿ, ಪ್ರಜಾಪ್ರಭುತ್ವದ ಅಡಿಯಲ್ಲಿ, ನೈಸರ್ಗಿಕ ಪರಿಸರದಲ್ಲಿ ಮಾನವ ಹಕ್ಕುಗಳನ್ನು ರಕ್ಷಿಸಲಾಗಿದೆ. ಪ್ರಜಾಪ್ರಭುತ್ವವು ಸಮಾನ ಭಾಗವಹಿಸುವಿಕೆ ಮತ್ತು ಎಲ್ಲರಿಗೂ ಸಮಾನವಾದ ಚಿಕಿತ್ಸೆಯನ್ನು ಒಳಗೊಂಡಿರುತ್ತದೆ. ಶಾಂತಿ ಮತ್ತು ಸುಸ್ಥಿರ ಅಭಿವೃದ್ಧಿ ಕೂಡ ಪ್ರಜಾಪ್ರಭುತ್ವದ ಪ್ರಮುಖ ಅಂಶಗಳಾಗಿವೆ ಎಂದರು.
ವೇದಿಕೆ ಮೇಲೆ ಎಂ.ಎಚ ವಡ್ಡರ, ಸಿ.ಎನ್ ಮಠದ ಇದ್ದರು.