ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಟೂರ್ನಿಯನ್ನು ಕುಕ್ಕುಂದೂರಿನ ಕೆ.ಎಂ.ಇ.ಎಸ್. ಪ.ಪೂ.ಕಾಲೇಜು ಪ್ರಾಂಶುಪಾಲ ರಾಮಚಂದ್ರ ನೆಲ್ಲಿಕಾರು ಉದ್ಘಾಟಿಸಿದರು 
ಜಿಲ್ಲೆ

ಪಠ್ಯೇತರ ಚಟುವಟಿಕೆ ವಿದ್ಯಾರ್ಥಿ ಜೀವನಕ್ಕೆ ರಹದಾರಿ

ಇಂದಿರಾ ಎನ್ ಕೆ

ಕಾರ್ಕಳ: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ ಅದು ಕ್ರೀಡಾ ಕ್ಷೇತ್ರದಲ್ಲಿ ಮಾತ್ರ. ಪಠ್ಯೇತರ ಚಟುವಟಿಕೆ ವಿದ್ಯಾರ್ಥಿಯ ಜೀವನಕ್ಕೆ ರಹದಾರಿ ಎಂದು ಕುಕ್ಕುಂದೂರಿನ ಕೆ.ಎಂ.ಇ.ಎಸ್. ಪ.ಪೂ.ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ನೆಲ್ಲಿಕಾರು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಬಾಸ್ಕೆಟ್ ಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ.ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕ್ರೀಡಾ ಸಂಯೋಜನಾಧಿಕಾರಿ ದಿನೇಶ್ ಕುಮಾರ್, ದೈಹಿಕ ಶಿಕ್ಷಣ ಉಪನ್ಯಾಸಕ ಸಂಘದ ಅಧ್ಯಕ್ಷ ಸತೀಶ್ ಹೆಗ್ಡೆ, ತಾಲೂಕು ದೈಹಿಕ ಶಿಕ್ಷಣ ಉಪನ್ಯಾಸಕ ಸಂಘದ ಮೇಲ್ವಿಚಾರಕ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು. ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕಿ ಸೌಜನ್ಯಾ ಹೆಗ್ಡೆ ವಂದಿಸಿದರು. ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.