ಕುಂದಾಪುರ: ಛತ್ರಪತಿ ಶ್ರೀ ಶಿವಾಜಿ ಅಭಿಮಾನಿ ಬಳಗ ಬಸ್ರೂರು ನೇತೃತ್ವದಲ್ಲಿ ಫೆ.13ರಂದು ನಡೆಯಲಿರುವ ಬಸ್ರೂರು ಸ್ವಾತಂತ್ರೃ ಮಹೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ ಮತ್ತು ಬೃಹತ್ ಬೈಕ್ ಜಾಥಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆಯಿತು.
ಛತ್ರಪತಿ ಶಿವಾಜಿ ಅಭಿಮಾನಿ ಬಳಗ ಅಧ್ಯಕ್ಷ ಉಮೇಶ್ ಆಚಾರ್ಯ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿ, ಕಾರ್ಯಕ್ರಮದಲ್ಲಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಭಾಗವಹಿಸಲಿದ್ದಾರೆ ಎಂದರು.
ಕುಂದಾಪುರ ಬಿಜೆಪಿ ಕ್ಷೇತ್ರ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅಧ್ಯಕ್ಷತೆ ವಹಿಸಿದ್ದರುರು. ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಮಾತನಾಡಿದರು. ಕುಂದಾಪುರದ ಪುರಸಭಾ ಮಾಜಿ ಉಪಾಧ್ಯಕ್ಷ ರಾಜೇಶ ಕಾವೇರಿ, ಪಕ್ಷದ ಮುಖಂಡ ಸಂಪತ್ ಕುಮಾರ್ ಶೆಟ್ಟಿ, ಪುರಸಭಾ ಉಪಾಧ್ಯಕ್ಷೆ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ್ ವಿ., ಪುರಸಭೆ ಸದಸ್ಯರು, ಕುಂದಾಪುರ ಬಿಜೆಪಿ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಛತ್ರಪತಿ ಶಿವಾಜಿ ಸಂಘಟನೆ ಪ್ರಮುಖರು ಉಪಸ್ಥಿತರಿದ್ದರು.
ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಕೆ.ಎಸ್. ಸ್ವಾಗತಿಸಿ, ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು. ಛತ್ರಪತಿ ಶಿವಾಜಿ ಅಭಿಮಾನಿ ಬಳಗ ಕಾರ್ಯದರ್ಶಿ ರಾಜೇಶ್ ಕೆಳಮನೆ ವಂದಿಸಿದರು.