ಜಿಲ್ಲೆ

ಉಡುಪಿ ಜಿಲ್ಲೆಗೆ ನೀಡುವೆ ವಿಶೇಷ ಆದ್ಯತೆ...

ಬಸ್ರೂರು ರಾಜೀವ ಶೆಟ್ಟಿ ಭರವಸೆ

ರಾಜ್ಯ ರೆಡ್​ಕ್ರಾಸ್​ ಸಂಸ್ಥೆಯ ಸಭಾಪತಿಯಾಗಿ ಆಯ್ಕೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಭಾರತೀಯ ರೆಡ್​ ಕ್ರಾಸ್​ಗೆ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ತನ್ನದೇ ಆದ ವಿಶೇಷತೆಯಿದೆ. ನನಗೆ ದೊರೆತ ಅವಕಾಶದ ಈ ಸಂದರ್ಭವನ್ನು ರಾಜ್ಯದ ಎಲ್ಲ ಜಿಲ್ಲೆಗಳನ್ನು ಸಮಾನವಾಗಿ ನೋಡಿಕೊಳ್ಳುತ್ತೇನೆ. ಉಡುಪಿ ಜಿಲ್ಲೆಗೆ ವಿಶೇಷ ಆದ್ಯತೆ ಕೊಡುತ್ತೇನೆ ಎಂದು ರಾಜ್ಯ ರೆಡ್​ಕ್ರಾಸ್​ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಭರವಸೆ ನೀಡಿದರು.

ರಾಜ್ಯ ರೆಡ್​ಕ್ರಾಸ್​ ಸಂಸ್ಥೆಯ ಸಭಾಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಉಡುಪಿಯ ರೆಡ್​ ಕ್ರಾಸ್​ ಭವನದಲ್ಲಿ ಜಿಲ್ಲಾ ರೆಡ್​ಕ್ರಾಸ್​ ಘಟಕ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ರಾಜ್ಯ ರೆಡ್​ ಕ್ರಾಸ್​ನ ಪ್ರತಿನಿಧಿಯಾಗಿದ್ದ ವಿ.ಜಿ. ಶೆಟ್ಟಿ ಸನ್ಮಾನಿಸಿದರು. ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ, ಇಲಾಖೆಯ ಯೋಜನಾಧಿಕಾರಿ ಶಿವಾಜಿ. ಎ.ಕೆ., ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ, ರೆಡ್​ಕ್ರಾಸ್​ನ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ, ಮಾಜಿ ಕಾರ್ಯದರ್ಶಿಗಳಾದ ಬಾಲಕೃಷ್ಣ ಶೆಟ್ಟಿ, ರತ್ನಾಕರ ಶೆಟ್ಟಿ, ಡಿಡಿಆರ್​ಸಿ ನೋಡಲ್​ ಅಧಿಕಾರಿ ಜಯಶ್ರೀ ಉಪಸ್ಥಿತರಿದ್ದರು.

ಜಿಲ್ಲಾ ರೆಡ್​ಕ್ರಾಸ್​ನ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು. ಖಚಾಂಚಿ ರಮಾದೇವಿ ವಂದಿಸಿದರು.