ವಿಜಯವಾಣಿ ಸುದ್ದಿಜಾಲ ಕುಂದಾಪುರ
ದೈಹಿಕ ಕ್ಷಮತೆಯಿಂದ ವ್ಯಕ್ತಿಯ ಸರ್ವತೋಮುಖ ಪ್ರಗತಿ, ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಸ್ನೇಹ, ಸಹಬಾಳ್ವೆಗಾಗಿ ಮ್ಯಾರಥಾನ್ ಓಟ ಆಯೋಜಿಸಲಾಗಿದೆ ಬಸ್ರೂರು ಸ್ಟೋರ್ಟ್ಸ್ ಕ್ಲಬ್ ಅಧ್ಯಕ್ಷ ಸತ್ಯನಾರಾಯಣ ಹೇಳಿದರು. ಬಸ್ರೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರೊೃೀತ್ಸವದ ಅಂಗವಾಗಿ ಸೋಮವಾರ ಮ್ಯಾರಥಾನ್ ಓಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾರ್ಕೂರು ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ರಮೇಶ ಆಚಾರ್, ರಾಜೇಂದ್ರ ಶೆಟ್ಟಿಗಾರ್, ರವೀಂದ್ರ ಪೂಜಾರಿ, ನಿವೃತ್ತ ಮುಖ್ಯ ಶಿಕ್ಷಕ ಕೆ.ವಿ.ಬಾಲಚಂದ್ರ ಶೆಟ್ಟಿ, ಅಶೋಕ್ ಶೆಟ್ಟಿ ಬಳ್ಕೂರು, ಬಸ್ರೂರು ಗ್ರಾಪಂ ಅಧ್ಯಕ್ಷ ಬೇಳೂರು ದಿನಕರ ಶೆಟ್ಟಿ, ಕಾವ್ರಾಡಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸದಾನಂದ ಬಳ್ಕೂರು, ನಿವೃತ್ತ ಮುಖ್ಯ ಶಿಕ್ಷಕ ದಿನಕರ ಆರ್. ಶೆಟ್ಟಿ, ನಿವೃತ್ತ ಪ್ರಾಂಶುಪಾಲ ಕೆ.ರಾಧಾಕೃಷ್ಣ ಶೆಟ್ಟಿ, ಸ್ಪೋರ್ಟ್ಸ್ ಕ್ಲಬ್ ಗೌರವ ಆಧ್ಯಕ್ಷ ಅಬ್ದುಲ್ ಅಜೀಜ್, ಉಪಾಧ್ಯಕ್ಷ ಶಾಹುಲ್ ಹಮೀದ್ ಮತ್ತಿತರರು ಉಪಸ್ಥಿತರಿದ್ದರು. ಅಶೋಕ್ ಕೆರೆಕಟ್ಟೆ ವಂದಿಸಿದರು. ಸಾರಿಕಾ ಅಶೊಕ್ ಕಾರ್ಯಕ್ರಮ ನಿರೂಪಿಸಿದರು. ಬಿ.ಕೆ.ಅಶೋಕ್ ಮತ್ತು ವಿವೇಕಾನಂದ ಸಹಕರಿಸಿದರು.