ಜಿಲ್ಲೆ

ಬಿಬಿಎಂಪಿ ಮಾಜಿ ಕಾರ್ಪೋರೇಟರ್​ ಆತ್ಮಹತ್ಯೆ; ಮನೆಯಲ್ಲೇ ನೇಣಿಗೆ ಶರಣು...

Webdesk - Ravikanth

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳ ಪಟ್ಟಿಗೆ ಇದೀಗ ಮತ್ತೊಂದು ಪ್ರಕರಣ ಸೇರಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಬಿಎಂಪಿಯಲ್ಲಿ ಕಾರ್ಪೋರೇಟರ್ ಆಗಿದ್ದ ಎಂ.ಬಿ. ಶಿವಪ್ಪ (58) ಆತ್ಮಹತ್ಯೆ ಮಾಡಿಕೊಂಡವರು. 1995-2001ರ ಅವಧಿಯಲ್ಲಿ ಕಾಂಗ್ರೆಸ್‌ನಿಂದ ಕಾರ್ಪೋರೇಟರ್ ಆಗಿದ್ದ ಇವರು ಇತ್ತೀಚೆಗೆ ಕಾಂಗ್ರೆಸ್​ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದ್ದರು.

ಶಿವಪ್ಪ ಅವರು ಬೆಂಗಳೂರಿನ ಅತ್ತಿಗುಪ್ಪೆ ಬಳಿ ಇರುವ ತಮ್ಮ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಏನು ಕಾರಣ ಎಂಬ ಬಗ್ಗೆ ಖಚಿತ ಮಾಹಿತಿ ಇನ್ನೂ ಬಹಿರಂಗಗೊಂಡಿದ್ದ. ಚಂದ್ರ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ತನಿಖೆ ನಡೆಯುತ್ತಿದೆ.