ಜಿಲ್ಲೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಾರದಂತೆ ಎಚ್ಚರ ವಹಿಸಿ

ಸುಂಟಿಕೊಪ್ಪ: ಹಬ್ಬವನ್ನು ಆಚರಿಸುವ ಸಂದರ್ಭ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದಂತೆ ಎಚ್ಚರ ವಹಿಸುವ ಮೂಲಕ ಹಬ್ಬಗಳನ್ನು ಆಚರಿಸಬೇಕು ಎಂದು ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ಹೇಳಿದರು.

ಶನಿವಾರ ಸಂಜೆ ಗೌರಿ- ಗಣೇಶ ಹಬ್ಬ ಆಚರಣೆ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಗಣಪತಿ ಪೆಂಡಾಲ್‌ಗಳಲ್ಲಿ ಹೆಚ್ಚಿನ ಶಬ್ದ ಬಳಸುವುದರಿಂದ ಹಿರಿಯರು ಮತ್ತು ಚಿಕ್ಕಮಕ್ಕಳಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಸಮಿತಿಯವರು ಗಮನಹರಿಸಬೇಕು ಎಂದರು.

ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅನುಮತಿ ಪಡೆದ ನಂತರವೇ ಗೌರಿ, ಗಣೇಶ ಪ್ರತಿಷ್ಠಾಪಿಸಬೇಕು. ಮುಂಜಾಗ್ರತ ಕ್ರಮವಾಗಿ ಸಿಸಿ ಕ್ಯಾಮರಾ ಅಳವಡಿಸಬೇಕು. ಅನಧಿಕೃತ ವಿದ್ಯುತ್ ಸಂಪರ್ಕ ಪಡೆಯುವಂತಿಲ್ಲ ಎಂದರು.

ಮೂರ್ತಿ ವಿಸರ್ಜನೆಯ ಸಂದರ್ಭ ಮೆರವಣಿಗೆ ತೆರಳುವ ಮಾರ್ಗಗಳ ಮಾಹಿತಿಯನ್ನು ಮೊದಲೇ ತಿಳಿಸಿರುವಂತೆ ತಿಳಿಸಿದರು.
ಹರದೂರು, ನಾಕೂರು ಶಿರಂಗಾಲ, 7ನೇ ಹೊಸಕೋಟೆ, ಕಂಬಿಬಾಣೆ, ಕೊಡಗರಹಳ್ಳಿ, ಹೆರೂರು, ಕೆದಕಲ್, ಹೊರೂರು, ಮತ್ತಿಕಾಡು, ಭೂತನಕಾಡು ವಿವಿಧ ಭಾಗದ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಇದ್ದರು.