ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಮತದಾರರ ಜಾಗೃತಿಗಾಗಿ ಅಗತ್ಯ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಧಾರವಾಡ ಜಿಲ್ಲಾ ಸಹಾಯಕ ಮತದಾರರ ನೋಂದಣಾಽಕಾರಿಯೂ ಆಗಿರುವ ಜಿಲ್ಲಾಕಾರಿ ದಿವ್ಯ ಪ್ರಭು ಹೇಳಿದರು.
ಜಿಲ್ಲಾಽಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪಶ್ಚಿಮ ಪದವೀಧರ ಮತಕ್ಷೇತ್ರದ ಮತದಾರರ ನೋಂದಣಿಗೆ ಸಂಬಂಧಿಸಿದಂತೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಅಽಕಾರಿಗಳಿಗೆ ಸೂಚಿಸಿದರು. ಸಹಾಯಕ ಮತದಾರರ ನೋಂದಣಾಽಕಾರಿಗಳು ಮತ್ತು ನಿಯೋಜಿತ ಅಽಕಾರಿಗಳು ಮತದಾರರ ಪಟ್ಟಿಗೆ ಸೇರಿಸಲು ಅರ್ಹ ಮತದಾರರನ್ನು ಗುರುತಿಸಿ, ಶೀಘ್ರವಾಗಿ ಅರ್ಹರನ್ನು ಪಟ್ಟಿಗೆ ಸೇರ್ಪಡೆ ಮಾಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರು ಪದವೀಧರಿದ್ದರೆ, ಅಂತಹ ಶಿಕ್ಷರು ಅರ್ಜಿಗಳನ್ನು ಭರ್ತಿ ಮಾಡುವಂತೆ ಎಲ್ಲ ಕ್ಷೇತ್ರ ಶಿಕ್ಷಣಾಕಾರಿಗಳು ಕ್ರಮ ವಹಿಸಬೇಕು ಎಂದರು.
ತಹಸೀಲ್ದಾರರು ಜಿಲ್ಲೆಯಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ, ಎಲ್ಲ ಪದವೀಧರರಿಗೆ ಚುನಾವಣೆಯ ಬಗ್ಗೆ ಮಾಹಿತಿ ನೀಡಿ, ವಿಶ್ವವಿದ್ಯಾಲಯಗಳಲ್ಲಿನ ಪದವೀಧರನ್ನು ಸಂಪರ್ಕಿಸುವ ಕಾರ್ಯ ಮಾಡಬೇಕು ಎಂದರು.
ಸಭೆಯಲ್ಲಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಉಪ ವಿಭಾಗಾಕಾರಿ ಶಾಲಂ ಹುಸೇನ್, ಎಲ್ಲ ತಾಲೂಕುಗಳ ತಹಸೀಲ್ದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.