ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬೀಚ್‌ನಲ್ಲಿ ಜ.11 ಮತ್ತು 12 ರಂದು ಬೀಚ್ ಉತ್ಸವ ನಡೆಯಲಿದೆ. ರೋಹನ್ ಕಾರ್ಪೊರೇಷನ್ ಸಹಯೋಗದಲ್ಲಿ ನಡೆಯುವ ಈ ಬೀಚ್ ಉತ್ಸವದಲ್ಲಿ ಎರಡು ದಿನಗಳ ಕಾಲ ಆಕರ್ಷಕ ಸಂಗೀತ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ.
ಜ.11ರಂದು ಸಾಯಂಕಾಲ 6ಕ್ಕೆ ನೃತ್ಯೋತ್ಸವ, 7.30ಕ್ಕೆ ಕದ್ರಿ ಮಣಿಕಾಂತ್ ಲೈವ್ ನಡೆಯಲಿದೆ. ಜ.12ರಂದು ಬೆಳಗ್ಗೆ 5.30ಕ್ಕೆ
ಯೋಗ, 6.30ಕ್ಕೆ ಉದಯ ರಾಗ, 9ಕ್ಕೆ ಜಲ ಕ್ರೀಡೆ, 9.30ಕ್ಕೆ ಮರಳು ಶಿಲ್ಪ ಸ್ಪರ್ಧೆ, ಸಾಯಂಕಾಲ 5.30ಕ್ಕೆ ನೃತ್ಯೋತ್ಸವ, 6.30ಕ್ಕೆ ಸಮಾರೋಪ ಸಮಾರಂಭ, 7.30ಕ್ಕೆ ರಘು ದೀಕ್ಷಿತ್ ಪ್ರಾಜೆಕ್ಟ್ ಲೈವ್ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.