ಜಿಲ್ಲೆ

ದನದ ಮಾಂಸ ಮಾರುತ್ತಿದ್ದವನ ಬಂಧನ

ಆರ್.ಕೃಷ್ಣ

ಮೈಸೂರು: ಅಕ್ರಮವಾಗಿ ಜಾನುವಾರು ಮಾಂಸ ಮಾರಾಟ ಮಾಡುತ್ತಿದ್ದ ರಾಜೀವ್‌ನಗರದ ಯಾಸೀನ್ ಖಾನ್‌ನನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಉಸ್ಮಾನಿಯ ಬ್ಲಾಕಿನಲ್ಲಿ ಯಾಸೀನ್ ಖಾನ್ ನಡೆಸುತ್ತಿದ್ದ ಅಂಗಡಿಯ ಮೇಲೆ ದಾಳಿ ನಡೆಸಿದ ಪೊಲೀಸರು, ಜಾನುವಾರು ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತನಿಂದ 260 ಕೆ.ಜಿ.ದನದ ಮಾಂಸ ಸೇರಿದಂತೆ ಇನ್ನಿತರ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಧೀಶರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.