ಜಿಲ್ಲೆ

ಬೆಳಗಾವಿ ಕಾಡಾ ಅಧ್ಯಕ್ಷರಾಗಿ ಯುವರಾಜ್ ಕದಮ್ ಅಧಿಕಾರ ಸ್ವೀಕಾರ

ಡಿ.ವಿ. ಕಮ್ಮಾರ

ಬೆಳಗಾವಿ:  ಬೆಳಗಾವಿಯ ಕಾಡಾ ಕಚೇರಿಯಲ್ಲಿ ಕಾಡಾ ನೂತನ ಅಧ್ಯಕ್ಷ ಯುವರಾಜ್ ಕದಮ್ ಅಧಿಕಾ್ ಸ್ವೀಕರಿಸಿದರು.

ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ  ಕದಮ್ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಡಾ ಅಧ್ಯಕ್ಷ ಯುವರಾಜ್ ಕದಮ್, ನನ್ನ ಸೇವೆಯನ್ನು ಗುರುತಿಸಿ ಪಕ್ಷ ಅವಕಾಶ ನೀಡಿದೆ. ಅದನ್ನು ಬಳಸಿಕೊಂಡು ಬಡವರ ಪರವಾಗಿ ಕೆಲಸ ಮಾಡುತ್ತೇನೆ. ಯೋಜನೆಗಳ ಅನುಷ್ಠಾನಕ್ಕೆ ಕ್ರಮ ವಹಿಸುತ್ತೇನೆ ಎಂದರು. ಈ ವೇಳೆ ಶಾಸಕ ರಾಜು ಕಾಗೆ, ಮಾಜಿ ಶಾಸಕ ಶಾಮ್‌ ಘಾಟಗೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹೊಟ್ಟಿಹೊಳಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಇತರರಿದ್ದರು.