ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ನಡೆದ ವಿಶೇಷ ಪರಿಷತ್ ಸಭೆಯಲ್ಲಿ ಪಾಲಿಕೆಯ 2023-24ನೇ ಸಾಲಿನ ₹5.82 ಲಕ್ಷ ಉಳಿತಾಯ ಬಜೆಟ್ ಮಂಡಿಸಲಾಯಿತು.
ಮೇಯರ್ ಶೋಭಾ ಸೋಮನ್ನಾಚೆ ₹484.09 ಕೋಟಿ ಗಾತ್ರದ ಬಜೆಟ್ ಮಂಡಿಸಿದರು.
2023-24ನೇ ಸಾಲಿಗೆ ವಿವಿಧ ಮೂಲಗಳಿಂದ ಪಾಲಿಕೆಗೆ ₹ 484.15 ಕೋಟಿ ಆದಾಯ ನಿರೀಕ್ಷಿಸಲಾಗಿದೆ.
ಸರ್ಕಾರಿ ನಿಯಮಾನುಸಾರ ಪರಿಸರ ಸ್ನೇಹಿ ಕಟ್ಟಡಗಳಿಗೆ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ಹಾಗೂ ಸ್ವಾತಂತ್ರ್ಯ ಯೋಧರಿಗೆ ಶೇ.10 ರಿಯಾಯಿತಿ ಮುಂದುವರಿಸಲಾಗಿದೆ. ನಿಗದಿತ ಅವಧಿಯಲ್ಲಿ ಆಸ್ತಿ ತೆರಿಗೆ ಪಾವತಿಸದವರಿಂದ ದಂಡದ ರೂಪದಲ್ಲಿ ₹3.25 ಕೋಟಿ ಆದಾಯ ನಿರೀಕ್ಷಿಸಲಾಗಿದೆ.