ಹಾರೂಗೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಐ.ಆರ್.ಮಠಪತಿ, ಸಂಗಮೇಶ ಹಚ್ಚಡದ, ಎಚ್.ಎನ್.ನಾಗಮೋಹನ್ ದಾಸ ಇತರರಿದ್ದರು.
ಹಾರೂಗೇರಿ: ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ-2025 ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.28ರಿಂದ 29ರ ವರೆಗೆ ನಡೆಯಲಿದೆ ಎಂದು ಶರಣ ವಿಚಾರ ವಾಹಿನಿ ಅಧ್ಯಕ್ಷ ಐ.ಆರ್.ಮಠಪತಿ ಹೇಳಿದರು.
ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಿಂದ ವೈಜ್ಞಾನಿಕ ಚಿಂತಕರು ಹಾಗೂ ಸಮಾಜ ಸುಧಾರಕರಾದ ಹಾರೂಗೇರಿಯ ಡಾ.ಬಸವರಾಜ ಹೊಸಪೇಟೆಯವರಿಗೆ ಎಚ್.ನರಸಿಂಹರಾವ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷ ಸಂಗಮೇಶ ಹಚ್ಚಡದ ಮಾತನಾಡಿ, ರಾಜ್ಯಮಟ್ಟದ ಸಮ್ಮೇಳನಕ್ಕೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣಕುಮಾರ, ಪವಾಡ ಭಂಜಕ ಹುಲಿಕಲ್ ನಟರಾಜ ಸೇರಿ ಇತರ ಗಣ್ಯರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಸಾಧಕರಿಗೆ ವಿಶಿಷ್ಟ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಎಸ್.ಎಲ್.ಬಾಡಗಿ, ವಿಠ್ಠಲ ಜೋಡಟ್ಟಿ ಇತರರಿದ್ದರು.