ನಿಪ್ಪಾಣಿಯ ಜಿ.ಐ.ಬಾಗೇವಾಡಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ಆಡಳಿತ ಮಂಡಳಿ ನಿರ್ದೇಶಕ ಪ್ರವೀಣ ಬಾಗೇವಾಡಿ ಉದ್ಘಾಟಿಸಿದರು. ಡಾ.ವಿ.ಬಿ.ಹಿರೇಮಠ, ಲಿಂಗರಾಜ ಗೋಧಿ ಇತರರಿದ್ದರು.
ನಿಪ್ಪಾಣಿ: ದೇಶದ ಸಮಗ್ರ ಅಭಿವೃದ್ಧಿಗೆ ಶಿಕ್ಷಣ, ತಂತ್ರಜ್ಞಾನ, ವಾಣಿಜ್ಯ, ಕೃಷಿ ಸೇರಿ ಅನೇಕ ಕ್ಷೇತ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ಹುಬ್ಬಳ್ಳಿ ಕೆಎಲ್‌ಇ ಸಂಸ್ಥೆಯ ಪಿ.ಸಿ.ಜಾಬಿನ್ ವಿಜ್ಞಾನ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಡಾ.ವಿ.ಬಿ.ಹಿರೇಮಠ ಹೇಳಿದರು.
ಸ್ಥಳೀಯ ಕೆಎಲ್‌ಇ ಸಂಸ್ಥೆಯ ಜಿ.ಐ.ಬಾಗೇವಾಡಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿರುವ ಆಶೀರ್ವಾದ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಲದ ಹರಿವಿನಲ್ಲಿ ದೂರಾದ ನೆನಪುಗಳು ಮತ್ತೆ ಒಂದೇ ವೇದಿಕೆಯಲ್ಲಿ ಬೆಸೆಯುತ್ತಿರುವುದು ವಿಶೇಷ. ಹಿರಿಯ ವಿದ್ಯಾರ್ಥಿಗಳು ನವೀಕೃತ ಮಹಾವಿದ್ಯಾಲಯದ ವಾತಾವರಣ ಆಸ್ವಾದಿಸಬೇಕು ಎಂದರು.
ಕೊಲ್ಲಾಪುರದ ಬಿಎಸ್‌ಎನ್‌ಎಲ್ ನಿವೃತ್ತ ಉಪ ಮಹಾವ್ಯವಸ್ಥಾಪಕ ಲಿಂಗರಾಜ ಗೋಧಿ ಮಾತನಾಡಿ, ಸಮ್ಮಿಲನ ಕಾರ್ಯಕ್ರಮ ಹಳೆಯ ನೆನಪುಗಳನ್ನು ಮತ್ತೆ ಜೀವಂತಗೊಳಿಸುತ್ತಿದೆ ಎಂದು ಹೇಳಿದರು.
ಆಡಳಿತ ಮಂಡಳಿ ಅಧ್ಯಕ್ಷ ಮಹೇಶ ಬಾಗೇವಾಡಿ, ಸದಸ್ಯ ಡಾ.ಎಸ್.ಆರ್. ಪಾಟೀಲ, ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಡಾ.ಎಂ.ಬಿ.ಕೋಥಳೆ ಮಾತನಾಡಿದರು. ಕಾರ್ಯಕ್ರಮವನ್ನು ಕೆಎಲ್‌ಇ ಸಂಸ್ಥೆ ಆಡಳಿತ ಮಂಡಳಿ ನಿರ್ದೇಶಕ ಪ್ರವೀಣ ಬಾಗೇವಾಡಿ ಉದ್ಘಾಟಿಸಿದರು. ಹಿರಿಯ ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು. ಬಳಿಕ ಸಾಂಸ್ಕೃತಿಕ ನೃತ್ಯ ಮತ್ತು ಗಾಯನ ಕಾರ್ಯಕ್ರಮ ನಡೆಯಿತು. ನಿವೃತ್ತ ಪ್ರಾಧ್ಯಾಪಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಆಡಳಿತ ಮಂಡಳಿ ಸದಸ್ಯ ರವೀಂದ್ರ ಶೆಟ್ಟಿ, ಎಂ.ಆರ್.ಪಾಟೀಲ, ಎಂ.ಎಂ.ಗಡಕರಿ, ಪ್ರೊ.ಶಿವಲಿಂಗ ನಾಯಕ, ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಂ.ಎಂ.ಹುರಳಿ, ಪಂಕಜ ಟಾಕಳೆ, ಗೀತಾ ಕಮತೆ, ನಮಿತಾ ನಾಯಿಕ, ಸೌಮ್ಯಾ ಪಾಟೀಲ ಇತರರಿದ್ದರು.