ಹುಕ್ಕೇರಿ ತಾಲೂಕಿನ ಸಂಕೇಶ್ವರ ಪುರಸಭೆ ವ್ಯಾಪ್ತಿಯ ಖಾಲಿ ಪ್ರದೇಶಗಳಲ್ಲಿ ಸಸಿಗಳನ್ನು ಬೆಳೆಸಲಾಗಿದೆ. 
ಬೆಳಗಾವಿ

ಕಾಂಕ್ರೀಟ್ ನಾಡಲ್ಲಿ ಹಸಿರು ಕ್ರಾಂತಿ!

ನಗರೀಕರಣ ಭರಾಟೆಯಲ್ಲಿ ಕಾಣೆಯಾಗುತ್ತಿರುವ ಹಸಿರಿಗೆ ಜೀವ ತುಂಬುವ ನಿಟ್ಟಿನಲ್ಲಿ ಅಂದಾಜು 40 ಸಾವಿರಕ್ಕೂ ಅಧಿಕ ಸಸಿಗಳನ್ನು ನೆಡುವ ಮೂಲಕ ವಿನೂತನ ಪ್ರಯೋಗಕ್ಕೆ ನಗರ ಸ್ಥಳೀಯ ಸಂಸ್ಥೆಗಳು ನಾಂದಿ ಹಾಡಿವೆ.

ತಾಪಮಾನ ಏರಿಕೆ ನಿಯಂತ್ರಣ, ಪರಿಸರ ಸಂರಕ್ಷಣೆ ಹಾಗೂ ನಗರ ಪ್ರದೇಶಗಳಲ್ಲಿ ಹಸಿರು ಹೊದಿಕೆ ಹೆಚ್ಚಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಮಿಯಾವಾಕಿ ಕಿರು ಅರಣ್ಯ ಯೋಜನೆಗೆ 38 ನಗರ ಸ್ಥಳೀಯ ಸಂಸ್ಥೆಗಳು ಒತ್ತು ನೀಡಿದ್ದು, ಖಾಲಿ ಜಾಗಗಳನ್ನು ಹಸಿರು ತಾಣಗಳನ್ನಾಗಿ ಪರಿವರ್ತಿಸಿವೆ. ಬೆಳಗಾವಿ ಮಹಾನಗರ ಪಾಲಿಕೆ, ಜಿಲ್ಲೆಯ ವಿವಿಧ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ 800ರಿಂದ ಸಾವಿರ ಸಸಿಗಳನ್ನು ನೆಟ್ಟಿದ್ದು, ವರ್ಷದೊಳಗೆ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಸಸಿಗಳನ್ನು ನೆಟ್ಟು ಬೆಳೆಸುವ ಗುರಿ ಹೊಂದಿವೆ.
ಸರ್ಕಾರ ಮಿಯಾವಾಕಿ ಕಿರು ಅರಣ್ಯ ಅಭಿವೃದ್ಧಿ ಯೋಜನೆಯಡಿ ಉದ್ಯಾನ, ಸರ್ಕಾರಿ ಜಾಗ ಹಾಗೂ ಸಾರ್ವಜನಿಕ ಬಳಕೆಯ ಖಾಲಿ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಕಿರು ಅರಣ್ಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು, ಗಿಡಗಳ ಸಂರಕ್ಷಣೆ ಮತ್ತು ಪೋಷಣೆಗೆ ಪ್ರತಿ ಎಕರೆಗೆ 14 ಲಕ್ಷ ಅನುದಾನ ನೀಡುತ್ತಿದೆ ಎಂದು ನಗರ ಸ್ಥಳೀಯ ಸಂಸ್ಥೆಗಳ ಪರಿಸರ ವಿಭಾಗದ ಮೇಲ್ವಿಚಾರಣಾ ಅಧಿಕಾರಿಗಳು ತಿಳಿಸಿದ್ದಾರೆ.
"

ಈ ಬಾರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಉದ್ಯಾನ, ಖಾಲಿ ಪ್ರದೇಶಗಳಲ್ಲಿ 2 ಲಕ್ಷಕ್ಕೂ ಅಧಿಕ ಸಸಿಗಳನ್ನು ನೆಡುವ ಗುರಿ ಹಾಕಿಕೊಂಡಿದ್ದೇವೆ. ಮಳೆ, ನೀರಿನ ಲಭ್ಯತೆ ಆಧಾರದ ಮೇಲೆ ಸಸಿಗಳನ್ನು ನೆಡಲಾಗುತ್ತಿದೆ.

— ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿ