ನಿಪ್ಪಾಣಿಯ ಸಿಬಿಎಸ್‌ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹಸಮ್ಮೇಳನಕ್ಕೆ ಗಣ್ಯರು ಚಾಲನೆ ನೀಡಿದರು. ಪ್ರವೀಣ ಬಾಗೇವಾಡಿ, ಆಶಾಕಾಂತಾ ಮಾರ್ಟಿನ್, ಸೀಮಾ ಬಾಗೇವಾಡಿ ಇತರರಿದ್ದರು. 
ಬೆಳಗಾವಿ

ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯ

ನಿಪ್ಪಾಣಿ: ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ವೇದಿಕೆ ಪಾತ್ರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕೆಎಲ್‌ಇ ಸಿಬಿಎಸ್‌ಸಿ ಶಾಲೆಯಲ್ಲಿ ವಿವಿಧ ಚಟುವಟಿಕೆ ಹಮ್ಮಿಕೊಂಡು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದೆ ಎಂದು ಕೆಎಲ್‌ಇ ಸಂಸ್ಥೆ ನಿರ್ದೇಶಕ ಪ್ರವೀಣ ಬಾಗೇವಾಡಿ ಹೇಳಿದರು.
ನಗರದ ಕೆಎಲ್‌ಇ ಸಂಸ್ಥೆಯ ಸಿಬಿಎಸ್‌ಇ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹಸಮ್ಮೇಳನ `ಇಟರ್ನೇಲಿಯಾ' ಉದ್ಘಾಟಿಸಿ ಮಾತನಾಡಿ, ಮಕ್ಕಳ ಆರೋಗ್ಯದತ್ತ ಶಾಲೆ ಸಿಬ್ಬಂದಿ ಗಮನಹರಿಸಬೇಕು ಎಂದರು. ಪ್ರಾಚಾರ್ಯೆ ಆಶಾಕಾಂತಾ ಮಾರ್ಟಿನ್ ಮಾತನಾಡಿ, ಕಥೆ, ನೃತ್ಯ, ಸಂಗೀತ ಮತ್ತು ನಾಟಕಗಳ ಸಂಗಮದೊಂದಿಗೆ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು. ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ, ಪಾಲಕರೊಂದಿಗೆ ಸಮನ್ವಯ ಮತ್ತು ಶಾಲೆಯಲ್ಲಿರುವ ಸೌಕರ್ಯಗಳ ಕುರಿತು ವಿವರಿಸಿದರು.
ಎರಡು ದಿನ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪುಸ್ತಕದ ಮಹತ್ವ ಕುರಿತು ಮಾಹಿತಿ ನೀಡಿದರು. ಸೀಮಾ ಬಾಗೇವಾಡಿ, ಲಕ್ಷ್ಮಣರಾಜು, ಕಲಾವಿದ ರಾಜ ಪುರೋಹಿತ, ಸಾಮಾಜಿಕ ಕಾರ್ಯಕರ್ತ ಶಿವಾನಂದ ಹಿರಟ್ಟಿ ಇತರರಿದ್ದರು.