ಬೆಳಗಾವಿ: ಸ್ವದೇಶಿ ವಸ್ತುಗಳ ಬಳಕೆ ನಮ್ಮ ಜೀವನದ ಭಾಗವಾಗಬೇಕು ಎಂಬುದೇ ಆತ್ಮನಿರ್ಭರ ಭಾರತದ ಉದ್ದೇಶವಾಗಿದೆ. ಹೀಗಾಗಿ, ಸ್ವದೇಶಿ ವಸ್ತುಗಳನ್ನು ಖರೀದಿಸಲು ಕಾರ್ಯಕರ್ತರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಬೇಕಿದೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ, ಭೀಮ ಸ್ಮತಿ ದಿನ ಹಾಗೂ ಸಂಘಟನಾ ಚಟುವಟಿಕೆಗಳ ಕುರಿತ ಸಭೆಯಲ್ಲಿ ಮಾತನಾಡಿದರು. ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಡಾ.ಅಂಬೇಡ್ಕರ್ ಆಶಯಗಳನ್ನು ಜನರ ಮಧ್ಯೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಕಳಕಳಿ ಬಿಜೆಪಿಗೆ ಮಾತ್ರ ಇದೆ ಎಂದರು.
ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಧನುಶ್ರೀ ದೇಸಾಯಿ, ಮಹೇಶ ಮೋಹಿತೆ, ಯಲ್ಲೇಶ ಕೊಲಕಾರ ಇತರರಿದ್ದರು.