ರಾಮದುರ್ಗ ಪಟ್ಟಣದ ನಿವೃತ್ತ ನೌಕರರ ಸಂಘದ ಕಾರ್ಯಾಲಯದಲ್ಲಿ ರಾಷ್ಟ್ರೀಯ ನಿವೃತ್ತ ನೌಕರರ ದಿನ ಆಚರಿಸಲಾಯಿತು. ಜಿ.ಟಿ ಆಲಗುಂಡಿ, ಈರಣ್ಣ ನಿಜಗುಣಿ ಇತರರಿದ್ದರು.
ಪಟ್ಟಣದ ತೇರ ಬಜಾರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ತಾಲೂಕು ಘಟಕದ ಕಾರ್ಯಾಲಯಲ್ಲಿ ಏರ್ಪಡಿಸಿದ್ದ ಪಿಂಚಣಿದಾರರ ದಿನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಿಂಚಣಿದಾರರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆಯಲು ಎಲ್ಲ ಪಿಂಚಣಿದಾರರು ಒಗ್ಗಟ್ಟಾಗಿ ಹೋರಾಟ ಮಾಡಬೇಕಾದ ಅಗತ್ಯವಿದೆ. ಆ ನಿಟ್ಟಿನಲ್ಲಿ ಪಿಂಚಣಿದಾರರ ಸಂಘಟನೆಗೆ ಒತ್ತು ನೀಡಬೇಕು ಎಂದರು.
ನಿವೃತ್ತ ನೌಕರರ ಹಾಗೂ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಜಿ.ಟಿ ಆಲಗುಂಡಿ ಮಾತನಾಡಿದರು. ರಾಜ್ಯ ನಿವೃತ್ತ ನೌಕರ ಸಂಘದ ಅಧ್ಯಕ್ಷ ಈರಣ್ಣ ನಿಜಗುಣಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಚೆ ಇಲಾಖೆ ನಿವೃತ್ತ ನೌಕರ ಬಿ.ಎಸ್.ಮುಳ್ಳೂರ. ಬಿ.ಎನ್.ಕಾಲಗಗ್ಗರಿ, ಎಸ್.ಪಿ.ಮುರಾರಿ ಇದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ.ಭೋಸಲೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎಸ್.ಪಿ.ಮುರಾರಿ ವಂದಿಸಿದರು.