ಅಕ್ಕಪಡೆೆ ಯೋಜನೆಗೆ ಜಿಲ್ಲೆಯಿಂದ ನೇಮಕಗೊಂಡ ಗೃಹರಕ್ಷಕ ದಳದ ಸಿಬ್ಬಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ನೀಡಿದರು. ಗೃಹರಕ್ಷಕ ದಳದ ಅಧಿಕಾರಿಗಳು, ಅಕ್ಕಪಡೆಗೆ ನೇಮಕವಾದ ಗೃಹರಕ್ಷಕಿಯರು ಇದ್ದರು. 
ಬೆಳಗಾವಿ

ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ‘ಅಕ್ಕಪಡೆ’ ಯೋಜನೆಗೆ ಜಿಲ್ಲೆಯಿಂದ ನೇಮಕಗೊಂಡಿರುವ ಗೃಹರಕ್ಷಕದಳದ ಸಿಬ್ಬಂದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಕಚೇರಿಗೆ ಆಗಮಿಸಿ, ಹೊಸ ವರ್ಷದ ಶುಭಾಶಯ ಕೋರಿದರು.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಅಕ್ಕಪಡೆ ಪರಿಣಾಮಕಾರಿ ಯಾಗಿ ಕಾರ್ಯನಿರ್ವಹಿಸಬೇಕು. ಮಹಿಳೆಯರು, ವಿಶೇಷವಾಗಿ ವಿದ್ಯಾರ್ಥಿನಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ನಮ್ಮವರು ಎನ್ನುವ ಭಾವನೆ ಬಂದು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವ ವಾತಾವರಣ ನಿರ್ಮಿಸಬೇಕೆಂದು ಸಲಹೆ ನೀಡಿದರು. ಈ ವೇಳೆ ಗೃಹರಕ್ಷಕ ದಳದ ಅಧಿಕಾರಿಗಳು, ಅಕ್ಕಪಡೆಗೆ ನೇಮಕವಾದ ಗೃಹರಕ್ಷಕಿಯರು ಇದ್ದರು.